ಮದರಸಾಗಳಲ್ಲಿ 'ವಂದೇ ಮಾತರಂ' ಹಾಡಿದರೆ ಆಕಾಶ ತಲೆ ಮೇಲೆ ಬೀಳುವುದಿಲ್ಲ: ಕೋಲ್ಕತ್ತಾ ಹೈಕೋರ್ಟ್

ಮದರಸಾಗಳಲ್ಲಿ ರಾಷ್ಟ್ರಗೀತೆಯಾದ 'ವಂದೇ ಮಾತರಂ'ನ ಸಂಪೂರ್ಣ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಬೇಕು ಎಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತು.
Kolkata high court
ಕೋಲ್ಕತ್ತಾ ಹೈಕೋರ್ಟ್
Updated on

ಮದರಸಾಗಳಲ್ಲಿ 'ವಂದೇ ಮಾತರಂ' ಗೀತೆಯ ಎಲ್ಲಾ ಆರು ಚರಣಗಳನ್ನು ಹಾಡಿದರೆ "ಆಕಾಶವೇ ಕುಸಿದು ಬೀಳುವುದಿಲ್ಲ" ಎಂದು ಕೋಲ್ಕತ್ತಾ ಹೈಕೋರ್ಟ್ ಬುಧವಾರ ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದೆ.

ಮದರಸಾಗಳಲ್ಲಿ ರಾಷ್ಟ್ರಗೀತೆಯಾದ 'ವಂದೇ ಮಾತರಂ'ನ ಸಂಪೂರ್ಣ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಬೇಕು ಎಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತು.

Kolkata high court
'ವಂದೇ ಮಾತರಂ'ಗೆ ಅವಮಾನಿಸಿದರೆ 3 ವರ್ಷ ಜೈಲು ಶಿಕ್ಷೆ: ನಾಳೆ ಸಂಸತ್ತಿನಲ್ಲಿ ಮಸೂದೆ ಮಂಡಿಸಲಿರುವ ಅಮಿತ್ ಶಾ

ಹಂಗಾಮಿ ಮುಖ್ಯ ನ್ಯಾಯಮೂರ್ತಿ ತಪಬ್ರತ ಚಕ್ರವರ್ತಿ ಮತ್ತು ನ್ಯಾಯಮೂರ್ತಿ ಪಾರ್ಥ ಸಾರಥಿ ಸೇನ್ ಅವರಿದ್ದ ಪೀಠವು ವಿಚಾರಣೆ ನಡೆಸಿತು.

ಆಕಾಶವೇ ಕುಸಿದು ಬೀಳುವುದಿಲ್ಲ. ಇಂದು ನನ್ನ ಧರ್ಮಕ್ಕೆ ಸೇರದ ಒಂದು ವಾಕ್ಯವನ್ನು ಉಚ್ಚರಿಸಲು ನನ್ನನ್ನು ಕೇಳಿದರೆ ಏನಾಗುತ್ತದೆ? ಅದರಿಂದ ನಾನು ಆ ಧರ್ಮಕ್ಕೆ ಸೇರದ ವ್ಯಕ್ತಿಯಾಗಿಬಿಡುತ್ತೇನೆಯೇ? ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ತಪಬ್ರತ ಚಕ್ರವರ್ತಿ ಪ್ರಶ್ನಿಸಿರುವುದಾಗಿ ಲೈವ್ ಲಾ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com