ನೋಯ್ಡಾ: ಶವವಾಗಿ ಪತ್ತೆಯಾದ ಲೋಕಸಭಾ ಸಚಿವಾಲಯದ ನಿರ್ದೇಶಕ; ಡೆತ್ ನೋಟ್ ವಶಪಡಿಸಿಕೊಂಡ ಪೊಲೀಸರು!

ಫೊರೆನ್ಸಿಕ್ ತಂಡ ಮತ್ತು ಸ್ಥಳೀಯ ಪೊಲೀಸರು ಸ್ಥಳವನ್ನು ಪರಿಶೀಲಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
police department
ಪೊಲೀಸ್ (ಸಾಂಕೇತಿಕ ಚಿತ್ರ)online desk
Updated on

ನೋಯ್ಡಾ: ನೋಯ್ಡಾದ ವಸತಿ ಸಮುಚ್ಚಯವೊಂದರಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ ಲೋಕಸಭಾ ಸಚಿವಾಲಯದ ನಿರ್ದೇಶಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಡೆತ್ ನೋಟ್ ಅನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ಸಾಲದ ಪ್ರಸ್ತಾಪವಿದೆ ಎಂದು ತಿಳಿದುಬಂದಿದೆ.

ಮೃತರನ್ನು 40 ವರ್ಷದ ಗೌರವ್ ಗೌತಮ್ ಎಂದು ಗುರುತಿಸಲಾಗಿದ್ದು, ಅವರು ಭಾನುವಾರ ಸೆಕ್ಟರ್ 82ರ 'ಕೇಂದ್ರೀಯ ವಿಹಾರ್-2 ಸೊಸೈಟಿ'ಯಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಫೇಸ್-2 ಪೊಲೀಸ್ ಠಾಣೆ ಪ್ರಕಾರ, ಗೌತಮ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಬಂದ ಮೆಮೊ ಮೂಲಕ ಘಟನೆಯ ಬಗ್ಗೆ ಮಾಹಿತಿ ಲಭಿಸಿತು. ಆಸ್ಪತ್ರೆಗೆ ತಲುಪಿದಾಗ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.

ಘಟನೆ ನಡೆದಾಗ ಗೌತಮ್ ಅವರ ಪತ್ನಿ ತಮ್ಮ ತವರು ಮನೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಗೆ ಮರಳಿದಾಗ ಫ್ಲಾಟ್‌ಗೆ ಒಳಗಿನಿಂದ ಲಾಕ್ ಮಾಡಿರುವುದನ್ನು ಕಂಡ ಅವರು, ಏನೋ ಅನಾಹುತ ಸಂಭವಿಸಿದೆ ಎಂದು ಶಂಕಿಸಿ ಭದ್ರತಾ ಸಿಬ್ಬಂದಿಯ ಸಹಾಯದಿಂದ ಮನೆ ಒಳಗೆ ಪ್ರವೇಶಿಸಿದರು.

police department
ಮಂಗಳೂರಿನಲ್ಲಿ ಮನಕಲಕುವ ಘಟನೆ: ಮನೆಯಲ್ಲಿ ತಂದೆ-ತಾಯಿ ಶವವಾಗಿ ಪತ್ತೆ; ಗೋಗರೆದ 2 ವರ್ಷದ ಮಗು!

ಅಲ್ಲಿ ತಮ್ಮ ಪತಿ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಕಂಡು ತಕ್ಷಣವೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ; ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಫೊರೆನ್ಸಿಕ್ ತಂಡ ಮತ್ತು ಸ್ಥಳೀಯ ಪೊಲೀಸರು ಸ್ಥಳವನ್ನು ಪರಿಶೀಲಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಮೃತದೇಹದ ಮೇಲಿನ ಪ್ರಾಥಮಿಕ ತನಿಖಾ ಪ್ರಕ್ರಿಯೆ (ಇನ್‌ಕ್ವೆಸ್ಟ್) ಪೂರ್ಣಗೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಫ್ಲಾಟ್‌ನಲ್ಲಿ ಪತ್ತೆಯಾದ ಡೆತ್ ನೋಟ್‌ನಲ್ಲಿ ಸಾಲದ ಕುರಿತು ಉಲ್ಲೇಖಿಸಲಾಗಿದೆ. ತನಿಖೆಯ ಭಾಗವಾಗಿ ಆ ಪತ್ರದ ವಿಷಯವನ್ನು ಪರಿಶೀಲಿಸಲಾಗುತ್ತಿದೆ. ಮುಂದಿನ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಪೊಲೀಸರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com