

ಚೆನ್ನೈ: ತಮಿಳಿಗ ವೆಟ್ರಿ ಕಳಗಂ(TVK) ಪಕ್ಷದ ಸಂಸ್ಥಾಪಕ ಹಾಗೂ ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ದಾಂಪತ್ಯ ದೊಡ್ಡ ತಿರುವು ಪಡೆದುಕೊಂಡಿದ್ದು, ನಟನ ಪತ್ನಿ ಸಂಗೀತಾ ಅವರು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನಕ್ಕೆ ಅರ್ಜಿಯನ್ನು ಹಿಂಪಡೆದಿದ್ದಾರೆ.
ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಸಂಗೀತಾ ಅವರು ಇಂದು ಹಿಂತೆಗೆದುಕೊಂಡಿದ್ದು, ಕೋರ್ಟ್ ಪ್ರಕರಣವನ್ನು ಇತ್ಯರ್ಥಪಡಿಸಿದೆ.
ಈ ವಿಚ್ಛೇದನ ಅರ್ಜಿ ತಮಿಳುನಾಡು ರಾಜಕೀಯ ಮತ್ತು ಸಿನಿ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ನಟಿ ತ್ರಿಷಾ ಕೃಷ್ಣನ್ ಹೆಸರು ಕೂಡ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ದಂಪತಿಗಳು ಮತ್ತೆ ಒಂದಾಗುವ ಸೂಚನೆ ನೀಡಿದ್ದು, ಪ್ರಕರಣ ಸುಖಾಂತ್ಯವಾಗಿದೆ.