ದೇಶ

ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ: ಹನಿಟ್ರ್ಯಾಪ್‌ ಬಲೆಗೆ ಬಿದ್ದ IAF ವಿಂಗ್‌ ಕಮಾಂಡರ್‌ ಬಂಧನ

ಐಎಎಫ್ ನೀಡಿದ ದೂರಿನ ಮೇರೆಗೆ, ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇಲೆ ಭಾರತೀಯ ವಾಯುಪಡೆಯ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ: ಹನಿಟ್ರ್ಯಾಪ್‌ ಬಲೆಗೆ ಬಿದ್ದ IAF ವಿಂಗ್‌ ಕಮಾಂಡರ್‌ ಬಂಧನ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಪಾಕಿಸ್ತಾನದ ಗುಪ್ತಚರ ಅಧಿಕಾರಿಯೊಬ್ಬರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಭಾರತೀಯ ವಾಯುಪಡೆಯ ರಕ್ಷಣಾ ಸಂಬಂಧಿತ ಅತ್ಯಂತ ಸೂಕ್ಷ್ಮ ಹಾಗೂ ಕಾರ್ಯತಂತ್ರದ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇಲೆ ಭಾರತೀಯ ವಾಯುಪಡೆ(ಐಎಎಫ್)ಯ ವಿಂಗ್‌ ಕಮಾಂಡರ್‌ ಹುದ್ದೆಯ ಅಧಿಕಾರಿಯೊಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಐಎಎಫ್ ನೀಡಿದ ದೂರಿನ ಮೇರೆಗೆ, ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇಲೆ ಭಾರತೀಯ ವಾಯುಪಡೆಯ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಅಧಿಕೃತ ರಹಸ್ಯ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮೇ 30 ರಂದು ಅವರನ್ನು ಬಂಧಿಸಲಾಗಿದೆ. ತನಿಖೆ ಪೂರ್ಣಗೊಂಡ ನಂತರ ಜುಲೈ 30 ರಂದು ನ್ಯಾಯಾಲಯದ ಮುಂದೆ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರಕರಣವು ಕೇವಲ ವ್ಯಕ್ತಿಗತ ಕೃತ್ಯವಲ್ಲದೆ, ಕಾರ್ಯತಂತ್ರದ ಮಿಲಿಟರಿ ಗುಪ್ತಚರವನ್ನು ಗುರಿಯಾಗಿಸಿಕೊಂಡಿರುವ ದೊಡ್ಡ ಮಟ್ಟದ ಅಂತರರಾಷ್ಟ್ರೀಯ ಬೇಹುಗಾರಿಕೆ ಜಾಲದ ಭಾಗವಾಗಿರಬಹುದು ಎಂದು ಹಿರಿಯ ಪೊಲೀಸ್‌‍ ಅಧಿಕಾರಿಗಳು ಶಂಕಿಸಿದ್ದಾರೆ.

IAF ಅಧಿಕಾರಿಗೆ ಹನಿಟ್ರ್ಯಾಪ್‌

ತನಿಖೆಯ ಪ್ರಕಾರ, ವೈಯಕ್ತಿಕ ಜೀವನದಲ್ಲಿ ಕಠಿಣ ಹಂತವನ್ನು ಎದುರಿಸುತ್ತಿದ್ದ ಅಧಿಕಾರಿಯನ್ನು ಗುರಿಯಾಗಿಸಲು ಸೋಶಿಯಲ್‌ ಮೀಡಿಯಾ ಮೂಲಕ ಮಹಿಳೆಯೊಬ್ಬರು ಸಂಪರ್ಕ ಸಾಧಿಸಿದ್ದಾರೆ.

ಚಾಟ್‌ಗಳು ಮತ್ತು ವಿಡಿಯೋ ಕರೆಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದು ಅಧಿಕಾರಿಯ ವಿಶ್ವಾಸ ಗಳಿಸಲಾಗಿದೆ. ಸೇನಾ ಪಡೆಗಳ ಚಲನವಲನಗಳು, ನಿಯೋಜನೆಗಳು, ಫೋಟೋಗಳು ಮತ್ತು ವೀಡಿಯೊಗಳಂತಹ ಸೂಕ್ಷ್ಮ ದತ್ತಾಂಶಗಳನ್ನು ಡಿಜಿಟಲ್‌ ಮಾಧ್ಯಮದ ಮೂಲಕ ಮಹಿಳೆಗೆ ವರ್ಗಾಯಿಸಲಾಗಿದೆ.

ಕೇವಲ ಅಧಿಕಾರಿಯಷ್ಟೇ ಅಲ್ಲದೆ, ಮತ್ತೊಬ್ಬ ಸಹೋದ್ಯೋಗಿಯ ಮೊಬೈಲ್‌ ಫೋನ್‌ನಲ್ಲಿ ನಿರ್ದಿಷ್ಟ ಅಪ್ಲಿಕೇಶನ್‌ ಒಂದನ್ನು ಇನ್‌ಸ್ಟಾಲ್‌ ಮಾಡಲು ಸೂಚಿಸಲಾಗಿದೆ. ಇದು ಡೇಟಾ ಕದಿಯಲು, ಲೊಕೇಶನ್‌ ಟ್ರ್ಯಾಕ್‌ ಮಾಡಲು ಹಾಗೂ ಸಂವಹನಗಳನ್ನು ಪ್ರತಿಬಂಧಿಸಲು ಬಳಸುವ ಸ್ಪೈವೇರ್‌ ಅಥವಾ ರಿಮೋಟ್‌-ಆಕ್ಸೆಸ್‌‍ ಮಾಲ್‌ವೇರ್‌ ಆಗಿತ್ತು ಎಂದು ತನಿಖೆ ವೇಳೆ ತಿಳಿದುಬಂದಿದೆ. ಪಾಕ್‌ ಮೂಲದ ಹ್ಯಾಂಡ್‌ಲರ್‌ಗಳ ನಂಟು: ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಕ್ಕೆ ಬಂದ ಆ ಮಹಿಳೆ, ತೆರೆಮರೆಯಲ್ಲಿ ಪಾಕಿಸ್ತಾನ ಮೂಲದ ಹ್ಯಾಂಡ್‌ಲರ್‌ಗಳ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದ್ದಳು ಎಂಬ ಸ್ಫೋಟಕ ಅಂಶ ಬೆಳಕಿಗೆ ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.