ಭೀಕರ: ಚಲಿಸುತ್ತಿದ್ದ ರೈಲಿನಿಂದ ಮೊಬೈಲ್ ಕದಿಯಲು ಕಳ್ಳನ ಯತ್ನ, ಕೆಳಗೆ ಬಿದ್ದು ಪ್ರಯಾಣಿಕ ದುರಂತ ಸಾವು, Video

ಗುಜರಾತ್‌ನ ಅಂಕಲೇಶ್ವರ ಸಮೀಪದ ಪನೋಲಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಮೊಬೈಲ್ ಕಸಿಯುವ ಯತ್ನವೊಂದು ದುರಂತದಲ್ಲಿ ಅಂತ್ಯಗೊಂಡಿದ್ದು, ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ.
Mobile Snatching Attempt Turns Fatal
ಚಲಿಸುತ್ತಿದ್ದ ರೈಲಿನಿಂದ ಪ್ರಯಾಣಿಕನ ಮೊಬೈಲ್ ಕದಿಯಲು ಯತ್ನಿಸಿದ ಕಳ್ಳ
Updated on

ಅಂಕಲೇಶ್ವರ: ಚಲಿಸುತ್ತಿದ್ದ ರೈಲಿನಿಂದ ಮೊಬೈಲ್ ಕದಿಯಲು ಕಳ್ಳನೋರ್ವ ಪ್ರಯತ್ನಿಸಿದ್ದು, ಈ ವೇಳೆ ಪ್ರಯಾಣಿಕ ಆಯತಪ್ಪಿ ಹಳಿ ಮೇಲೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

ಗುಜರಾತ್‌ನ ಅಂಕಲೇಶ್ವರ ಸಮೀಪದ ಪನೋಲಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಮೊಬೈಲ್ ಕಸಿಯುವ ಯತ್ನವೊಂದು ದುರಂತದಲ್ಲಿ ಅಂತ್ಯಗೊಂಡಿದ್ದು, ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ.

ರೈಲು ನಿಲ್ದಾಣದ ಮೂಲಕ ರೈಲು ಸಾಗುತ್ತಿದ್ದ ವೇಳೆ ರೈಲಿನ ಬಾಗಿಲ ಬಳಿ ನಿಂತಿದ್ದ ವ್ಯಕ್ತಿಯೊಬ್ಬರಿಂದ ಪ್ಲಾಟ್ ಫಾರ್ಮ್ ನಲ್ಲಿದ್ದ ಕಳ್ಳನೋರ್ವ ಮೊಬೈಲ್ ಕಸಿಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಪ್ರಯಾಣಿಕ ಆಯತಪ್ಪಿ ರೈಲಿನಿಂದ ಕೆಳಗೆಬಿದ್ದಿದ್ದು ನೋಡ ನೋಡುತ್ತಲೇ ಪ್ಲಾಟ್ ಫಾರ್ಮ್ ನಿಂದ ಹಳಿ ಮೇಲೆ ಬಿದ್ದು ರೈಲಿಗೆ ಸಿಲುಕಿದ್ದಾರೆ.

ರೈಲಿನಿಂದ ಬಿದ್ದ ಪರಿಣಾಮ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವಿಷ್ಟೂ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

Mobile Snatching Attempt Turns Fatal
ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ; ಅಜಿತ್ ಪವಾರ್ ದುರಂತದ ಬಳಿಕ 2ನೇ ಘಟನೆ

ಪೊಲೀಸ್ ತನಿಖೆ

ಘಟನೆಯ ಬಗ್ಗೆ ರೈಲ್ವೆ ಪೊಲೀಸರು ತನಿಖೆ ಆರಂಭಿಸಿದ್ದು, ಮೊಬೈಲ್ ಕಸಿಯಲು ಯತ್ನಿಸಿದ ವ್ಯಕ್ತಿ ಯಾರು ಮತ್ತು ಘಟನೆಗೆ ನಿಖರವಾಗಿ ಕಾರಣವೇನು ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಚಲಿಸುವ ರೈಲುಗಳಲ್ಲಿ ಪ್ರಯಾಣಿಕರ ಸುರಕ್ಷತೆ ಹಾಗೂ ಮೊಬೈಲ್ ಕಳ್ಳತನದಂತಹ ಘಟನೆಗಳ ಬಗ್ಗೆ ಈ ದುರಂತ ಮತ್ತೊಮ್ಮೆ ಆತಂಕ ಮೂಡಿಸಿದೆ. ಮೃತ ವ್ಯಕ್ತಿಯ ಗುರುತು ಹಾಗೂ ಘಟನೆಯ ಸಂಪೂರ್ಣ ವಿವರಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com