ದೇವರ ವಿಗ್ರಹದ ರೀಲ್ಸ್, ವಿಡಿಯೋಗಳಿಗೆ ಬ್ರೇಕ್; ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧ ಮಾಡಿದ ವಿಜಯ್ ಸರ್ಕಾರ

ದೇವರ ವಿಗ್ರಹದ ರೀಲ್ಸ್, ವಿಡಿಯೋಗಳಿಗೆ ಬ್ರೇಕ್: ಮದ್ರಾಸ್ ಹೈಕೋರ್ಟ್ ಸೂಚನೆಯ ಮೇರೆಗೆ ದೇವಾಲಯ ಆವರಣದಲ್ಲಿ ಮೊಬೈಲ್ ನಿಷೇಧ; ತಮಿಳುನಾಡಿನ ಎಲ್ಲಾ ದೇವಾಲಯಗಳಲ್ಲಿ ಸೆಪ್ಟೆಂಬರ್ 1ರಿಂದ ಮೊಬೈಲ್ ಫೋನ್ ಬಳಕೆ ಸಂಪೂರ್ಣ ನಿಷೇಧ. ಆ ಕುರಿತ ವರದಿ ಇಲ್ಲಿದೆ:
Temple
ದೇವಸ್ಥಾನOnline Desk
Updated on

ಚೆನ್ನೈ (ತಮಿಳುನಾಡು): ದೇವಾಲಯದೊಳಗೆ ದೇವರ ವಿಗ್ರಹದ ಚಿತ್ರ ತೆಗೆಯುತ್ತಾ ಬೇರೆಯವರಗ ದರ್ಶನಕ್ಕೆ ತೊಂದರೆ ಉಂಟುಮಾಡುವ ಪ್ರಕರಣಗಳು ಹೆಚ್ಚಾದ ಕಾರಣ, ತಮಿಳುನಾಡು ಸರ್ಕಾರವು ರಾಜ್ಯದ ಎಲ್ಲಾ ದೇವಾಲಯಗಳ ಆವರಣದಲ್ಲಿ ಮೊಬೈಲ್ ಫೋನ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಸೆಪ್ಟೆಂಬರ್ 1 ರಿಂದ ನಿಷೇಧ!

ಇತ್ತೀಚಿನ ದಿನಗಳಲ್ಲಿ ಅನೇಕ ದೇವಾಲಯಗಳ ಗರ್ಭಗುಡಿ ಹಾಗೂ ದೇವರ ವಿಗ್ರಹಗಳ ದೃಶ್ಯಗಳನ್ನು ಮೊಬೈಲ್ ಮೂಲಕ ವಿಡಿಯೋ ಮಾಡಿ, ಸಾಮಾಜಿಕ ಮಾಧ್ಯಮಗಳಲ್ಲಿ ರೀಲ್ಸ್ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿತ್ತು. ಇದು ದೇವಾಲಯಗಳ ಆಧ್ಯಾತ್ಮಿಕ ವಾತಾವರಣಕ್ಕೆ ಧಕ್ಕೆ ತರುತ್ತಿದೆ ಎಂದು ಸೆಪ್ಟೆಂಬರ್ 1 ರಿಂದ ಸಂಪೂರ್ಣವಾಗಿ ನಿಷೇಧಿಸಿ ತಮಿಳುನಾಡು ಸರ್ಕಾರದ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು ಹೊಸ ನಿಯಮ ಜಾರಿ ಮಾಡಿದೆ. ಇದಕ್ಕೂ ಮುನ್ನ ಮದ್ರಾಸ್ ಹೈಕೋರ್ಟ್ ದೇವಾಲಯಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಾಗಿ ಆದೇಶ ನೀಡಿತ್ತು.

ಮುಂದುವರೆದು, ರಾಜ್ಯಸರ್ಕಾರವು ಸೆಪ್ಟೆಂಬರ್ 1 ರ ಒಳಗಾಗಿ ರಾಜ್ಯದ ಎಲ್ಲಾ ಪ್ರಮುಖ ದೇವಾಲಯಗಳ ಪ್ರವೇಶ ದ್ವಾರ ಅಥವಾ ಪಾದರಕ್ಷೆ ಇಡುವ ಜಾಗದ ಬಳಿ ಮೊಬೈಲ್ ಫೋನ್‌ಗಳನ್ನು ಸುರಕ್ಷಿತವಾಗಿ ಇಡಲು ಪ್ರತ್ಯೇಕ ಕೌಂಟರ್‌ಗಳನ್ನು ನಿರ್ಮಿಸಲಾಗುವುದು. ಈ ವೇಳೆ ಭಕ್ತರು ತಮ್ಮ ಫೋನ್‌ಗಳನ್ನು ಇಲ್ಲಿ ಜಮಾವಣೆ ಮಾಡಲು ಪ್ರತಿ ಮೊಬೈಲ್‌ಗೆ ಕೇವಲ ₹5 ಶುಲ್ಕ ಪಾವತಿಸಬೇಕಾಗುತ್ತದೆ. ಇನ್ನು, ಫೋನ್ ಪಡೆದ ತಕ್ಷಣ ಇಂಟಿಗ್ರೇಟೆಡ್ ಟೆಂಪಲ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ITMS) ಮೂಲಕ ಭಕ್ತರಿಗೆ ಅಧಿಕೃತ ರಸೀದಿಯನ್ನು ನೀಡಲಾಗುತ್ತದೆ. ಅದರಂತೆ, ದರ್ಶನ ಮುಗಿದ ತರುವಾಯೂ ಈ ರಸೀದಿ ತೋರಿಸಿ ಫೋನ್ ಮರಳಿ ಪಡೆಯಬಹುದು.

Temple
ದಳಪತಿ ದಾಂಪತ್ಯದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ತಮಿಳುನಾಡು ಸಿಎಂ ವಿಜಯ್ ಪತ್ನಿ ಸಂಗೀತಾ; ಪ್ರಕರಣ ಇತ್ಯರ್ಥ

ಏತನ್ಮಧ್ಯೆ, ವಿಜಯ್ ಸರ್ಕಾರದ ಈ ನಿಯಮವು ಎಲ್ಲರಿಗೂ ಸಮಾನವಾಗಿ ಅನ್ವಯಿಸುತ್ತದೆ. ಅದರಂತೆ, ಪ್ರಮುಖ ರಾಜಕಾರಣಿಗಳು, ಚಲನಚಿತ್ರ ನಟ-ನಟಿಯರು ಅಥವಾ ಪ್ರಭಾವಿ ವ್ಯಕ್ತಿಗಳು ದೇವಾಲಯಕ್ಕೆ ಭೇಟಿ ನೀಡಿದಾಗಲೂ ಅವರ ಫೋಟೋ ಅಥವಾ ವಿಡಿಯೋ ಚಿತ್ರೀಕರಣಕ್ಕೆ ಅವಕಾಶ ಇರುವುದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com