ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಜಾರ್ಖಂಡ್‌ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗವನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶಾಂತಿಯುತ ಪ್ರತಿಭಟನೆ ನಡೆಸುವ ಹಕ್ಕಿದೆ. ಮಾತುಕತೆ ಮಾತ್ರ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಎಂದು ಅವರು ಹೇಳಿದರು.
Rahul Gandhi
ರಾಹುಲ್ ಗಾಂಧಿ
Updated on

ನವದೆಹಲಿ: ಜಾರ್ಖಂಡ್‌ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗವನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶಾಂತಿಯುತ ಪ್ರತಿಭಟನೆ ನಡೆಸುವ ಹಕ್ಕಿದೆ. ಮಾತುಕತೆ ಮಾತ್ರ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಎಂದು ಅವರು ಹೇಳಿದರು. ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ರಾಹುಲ್, ಜಾರ್ಖಂಡ್ ಸರ್ಕಾರ ಈ ವಿದ್ಯಾರ್ಥಿಗಳ ಮಾತನ್ನು ಆಲಿಸಬೇಕು. ಪ್ರತಿಯೊಂದು ಸಮಸ್ಯೆಯನ್ನು ತಕ್ಷಣವೇ ಪರಿಹರಿಸಬೇಕು ಎಂದು ಹೇಳಿದರು.

ರಾಂಚಿಯಲ್ಲಿ ಜೆಪಿಎಸ್‌ಸಿ-ಜೆಎಸ್‌ಎಸ್‌ಸಿ ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆಯ ಸಮಯದಲ್ಲಿ ಲಾಠಿಚಾರ್ಜ್ ಬಗ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಜಾರ್ಖಂಡ್‌ನ ವಿದ್ಯಾರ್ಥಿಗಳಿಗೆ ನನ್ನ ಸಂದೇಶ ಸ್ಪಷ್ಟವಾಗಿದೆ. ಶಾಂತಿಯುತವಾಗಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಯಾವುದೇ ರೀತಿಯ ಹಿಂಸಾಚಾರವನ್ನು ನಾವು ಖಂಡಿಸುತ್ತೇವೆ. ಅದು ಎಲ್ಲಿ ಸಂಭವಿಸಿದರೂ, ನಾವು ಅದನ್ನು ಖಂಡಿಸುತ್ತೇವೆ, ವಿರೋಧಿಸುತ್ತೇವೆ. ನಾವು ಅದನ್ನು ಬೆಂಬಲಿಸುವುದಿಲ್ಲ. ಪ್ರತಿಭಟನೆ ಶಾಂತಿಯುತವಾಗಿರುವವರೆಗೆ ಅದರ ವಿರುದ್ಧ ಹಿಂಸಾತ್ಮಕ ಕ್ರಮವನ್ನು ನಾವು ವಿರೋಧಿಸುತ್ತೇವೆ ಎಂದರು.

Rahul Gandhi
17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತಬ್ಧ; ನಮ್ಮ ಬೇಡಿಕೆಗಳಿಗೆ ಹೆದರಿ PM ಮೋದಿ, ಅಮಿತ್ ಶಾ ಸದನಕ್ಕೆ ಬರುತ್ತಿಲ್ಲ: ಖರ್ಗೆ; Video

ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ಸಮಯದಲ್ಲಿ ನಡೆದ ಹಿಂಸಾಚಾರದ ಬಗ್ಗೆಯೂ ರಾಹುಲ್ ಗಾಂಧಿ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ. ಶಾಂತಿಯುತವಾಗಿ ತಮ್ಮ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಗನ್‌, ಬಂದೂಕು, ಮೊಳೆಗಳಿಂದ ತುಂಬಿದ ಲಾಠಿ ಮತ್ತು ಅಶ್ರುವಾಯು ಶೆಲ್‌ಗಳನ್ನು ಬಳಸಿ ದಾಳಿ ಮಾಡಲಾಯಿತು. ಪೊಲೀಸರು ಯುವತಿಯರನ್ನು ಥಳಿಸಿದರು. ಹಲವರ ಖಾಸಗಿ ಭಾಗಗಳಿಗೆ ಗಾಯಗಳಾಗಿದ್ದವು. ಅಪ್ರಾಪ್ತ ವಯಸ್ಕರ ಮೂಳೆಗಳು ಮುರಿದಿದ್ದವು. ಮೋದಿ ಸರ್ಕಾರ ಪ್ರಶ್ನೆಗಳಿಗೆ ತುಂಬಾ ಕ್ರೂರವಾಗಿ ಪ್ರತಿಕ್ರಿಯಿಸುತ್ತದೆ ಎಂದು ಅವರು ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುರಿಯಾಗಿಸಿಕೊಂಡು ರಾಹುಲ್ ಗಾಂಧಿ, ಗೃಹ ಸಚಿವರೇ? ಸುಮಾರು 20 ದಿನಗಳು ಕಳೆದಿವೆ. ಆದರೆ ಅಮಿತ್ ಶಾ ಈ ವಿಷಯದ ಬಗ್ಗೆ ಉತ್ತರಿಸಲು ಸಂಸತ್ತಿಗೆ ಬಂದಿಲ್ಲ. ಚರ್ಚೆಗೆ ವಿರೋಧ ಪಕ್ಷಗಳಿಂದ ಬಂದ ಪ್ರತಿಯೊಂದು ಪ್ರಸ್ತಾಪವನ್ನು ತಿರಸ್ಕರಿಸಲಾಗಿದೆ. ಅವರ ಮೌನ ಕೇವಲ ಅಜ್ಞಾನ ಅಥವಾ ಲೋಪವಲ್ಲ. ಇದು ಹಿಂಸೆಗೆ ಅನುಮೋದನೆ. ಅವರು ತಪ್ಪಿತಸ್ಥರು ಅಥವಾ ಅಸಮರ್ಥರು. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಗೆ ನಾವು ಒತ್ತಾಯಿಸುತ್ತೇವೆ. ಮತ್ತು ಅವರನ್ನು ಹೊಣೆಗಾರರನ್ನಾಗಿ ಮಾಡುವವರೆಗೆ, ಈ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com