‘ಇದು ನನ್ನ ಮತ್ತು ವಿದ್ಯಾರ್ಥಿಗಳ ನಡುವಿನ ವಿಚಾರ’: ಬಾರ್ ಕೌನ್ಸಿಲ್‌ಗೆ ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯಕಾಂತ್ ತರಾಟೆ

ಕಾನೂನು ವೃತ್ತಿಯ ಅತ್ಯುನ್ನತ ನಿಯಂತ್ರಣ ಸಂಸ್ಥೆಯಾಗಿರುವ BCI, ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಭಾಗವಹಿಸುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸಿದ ಅಭಿಯಾನದ ಕುರಿತು ತನಿಖೆ..
Chief Justice Surya Kant Mishra Raps Bar Council Over Order
ಬಾರ್ ಕೌನ್ಸಿಲ್‌ಗೆ ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯಕಾಂತ್ ತರಾಟೆ
Updated on

ನವದೆಹಲಿ: NALSAR ವಿದ್ಯಾರ್ಥಿಗಳು ಅಥವಾ ಬೋಧಕ ಸಿಬ್ಬಂದಿ ವಿರುದ್ಧ ಯಾವುದೇ ದಂಡಾತ್ಮಕ ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಸೂಚಿಸಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಹೊರಡಿಸಿದ್ದ ಸುತ್ತೋಲೆಗಳ ಕುರಿತು ಉತ್ತರ ನೀಡುವಂತೆ ಕೌನ್ಸಿಲ್‌ಗೆ ಸೂಚಿಸಿದೆ.

ಹೈದರಾಬಾದ್‌ನ NALSAR ಯೂನಿವರ್ಸಿಟಿ ಆಫ್ ಲಾ 2026ರ ಬ್ಯಾಚ್‌ನ ಯಾವುದೇ ಪದವೀಧರರನ್ನು ನೋಂದಣಿ ಮಾಡಿಕೊಳ್ಳಬಾರದು ಎಂದು ಎಲ್ಲಾ ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ನಿರ್ದೇಶನ ನೀಡಿದ್ದ ಬಾರ್ ಕೌನ್ಸಿಲ್ ಆಫ್ ಇಂಡಿಯಾಗೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮಿಶ್ರಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾನೂನು ವೃತ್ತಿಯ ಅತ್ಯುನ್ನತ ನಿಯಂತ್ರಣ ಸಂಸ್ಥೆಯಾಗಿರುವ BCI, ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಭಾಗವಹಿಸುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸಿದ ಅಭಿಯಾನದ ಕುರಿತು ತನಿಖೆ ನಡೆಯುವವರೆಗೆ ಪದವೀಧರರ ನೋಂದಣಿಯನ್ನು ತಡೆಹಿಡಿಯುವಂತೆ ಸೂಚಿಸಿತ್ತು.

ಆದರೆ, ಆದೇಶ ಹೊರಡಿಸಿದ ಕೆಲವೇ ಗಂಟೆಗಳಲ್ಲಿ BCI ತನ್ನ ಬಳಿ ಲಭ್ಯವಿರುವ ಇತ್ತೀಚಿನ ಮಾಹಿತಿಯ ಪ್ರಕಾರ, 2026ರ NALSAR ಪದವೀಧರರ ಪೈಕಿ ಬಹುತೇಕರು ನಿರಪರಾಧಿಗಳಾಗಿದ್ದು, ಮುಖ್ಯ ನ್ಯಾಯಮೂರ್ತಿಗಳನ್ನು ಅಗೌರವಿಸುವ ಯಾವುದೇ ಕ್ರಮದಲ್ಲಿ ಭಾಗವಹಿಸುವ ಉದ್ದೇಶ ಹೊಂದಿಲ್ಲ ಎಂಬುದು ತಿಳಿದುಬಂದಿದೆ ಎಂದು ಹೇಳಿತು.

Chief Justice Surya Kant Mishra Raps Bar Council Over Order
ಜಂತರ್ ಮಂತರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು Gen Zಗಳೇ ಅಲ್ಲ; 'ಶಬಾನಾ ಅಜ್ಮಿಯಂತವರೇ' ಹೆಚ್ಚು: ಕಂಗನಾ

ನಾನೂ ವಿದ್ಯಾರ್ಥಿಯಾಗಿದ್ದಾಗ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿದ್ದೆ

BCI ಕ್ರಮದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, “ಇದು ಸಂಪೂರ್ಣ ಅನಗತ್ಯ. ನಾನೂ ವಿದ್ಯಾರ್ಥಿಯಾಗಿದ್ದಾಗ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದೆ. ಇದು ನನ್ನ ಮತ್ತು ವಿದ್ಯಾರ್ಥಿಗಳ ನಡುವಿನ ಸಂವಾದ. ಇದರಲ್ಲಿ ಮಧ್ಯಪ್ರವೇಶಿಸಲು ಅವರು (BCI) ಯಾರು?” ಎಂದು ಪ್ರಶ್ನಿಸಿದರು.

BCI ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿತು. NALSAR ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿ ವಿರುದ್ಧ ಯಾವುದೇ ದಂಡಾತ್ಮಕ ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದ್ದು, BCI ಹೊರಡಿಸಿದ ಸುತ್ತೋಲೆಗಳ ಕುರಿತು ತನ್ನ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ. BCI ಪರ ವಕೀಲರು ನ್ಯಾಯಪೀಠದ ಮುಂದೆ ಹಾಜರಾಗಿ, ಸುತ್ತೋಲೆಯನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಅಭಿಯಾನವನ್ನು ಆರಂಭಿಸಿದವರು, ಸಂಘಟಿಸಿದವರು ಅಥವಾ ವಿದ್ಯಾರ್ಥಿಗಳನ್ನು ಒಗ್ಗೂಡಿಸಿದವರ ಕುರಿತು ವಾಸ್ತವಾಂಶಗಳ ವರದಿ ಸಲ್ಲಿಸುವಂತೆ BCI ವಿಶ್ವವಿದ್ಯಾಲಯದ ಉಪಕುಲಪತಿಗೆ ಸೂಚಿಸಿತ್ತು. ತನಿಖೆ ಪೂರ್ಣಗೊಳ್ಳುವವರೆಗೆ 2026ರ ಬ್ಯಾಚ್‌ನ ಯಾವುದೇ ಪದವೀಧರರನ್ನು ಯಾವುದೇ ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಬಾರದು ಎಂದೂ ನಿರ್ದೇಶಿಸಿತ್ತು. ಆದರೆ, ಇದೀಗ ಆ ನಿರ್ಧಾರವನ್ನು ಹಿಂಪಡೆಯಲಾಗಿದೆ.

ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ (SCBA) ಅಧ್ಯಕ್ಷ ಹಾಗೂ ಹಿರಿಯ ವಕೀಲ ವಿಕಾಸ್ ಸಿಂಗ್ ಅವರು BCIಯ ಕ್ರಮವನ್ನು “ಅನಿಯಂತ್ರಿತ, ಕಾನೂನುಬಾಹಿರ ಮತ್ತು ಅಸಮಂಜಸ” ಎಂದು ತೀವ್ರವಾಗಿ ಟೀಕಿಸಿದ್ದರು.

Chief Justice Surya Kant Mishra Raps Bar Council Over Order
ತಮಿಳುನಾಡು: ಕಲಿಕೆಗೆ ವಯಸ್ಸಿನ ಮಿತಿ ಇಲ್ಲ; ಡಾಕ್ಟರ್ ಆಗುವ 34 ವರ್ಷಗಳ ಕನಸು ನನಸು; ನೀಟ್ ಪರೀಕ್ಷೆಯಲ್ಲಿ 51 ವರ್ಷದ ವ್ಯಕ್ತಿ ಉತ್ತೀರ್ಣ!

ವಿದ್ಯಾರ್ಥಿಗಳಿಗೆ ಕಾನೂನು ವೃತ್ತಿಗೆ ಪ್ರವೇಶಿಸುವ ಹಕ್ಕನ್ನು ಕಸಿದುಕೊಳ್ಳುವ ಬೆದರಿಕೆ ಹಾಕಲು ಸಾಧ್ಯವಿಲ್ಲ

ಆಗಸ್ಟ್ 13ರಂದು BCI ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರಿಗೆ ಬರೆದ ಪತ್ರದಲ್ಲಿ ವಿಕಾಸ್ ಸಿಂಗ್ ಅವರು ಈ ನಿರ್ದೇಶನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ವಿದ್ಯಾರ್ಥಿಗಳ ಅಭಿವ್ಯಕ್ತಿ ಮತ್ತು ಮಾತಿನ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಚಲಾಯಿಸಿದ್ದಕ್ಕಾಗಿ ಅವರನ್ನು ಬೆದರಿಸುವ ಪ್ರಯತ್ನದಂತೆ ಈ ರೀತಿಯ ಸಾಮೂಹಿಕ ನಿರ್ಬಂಧ ಕಾಣುತ್ತಿದೆ ಎಂದು ಅವರು ಹೇಳಿದ್ದಾರೆ.

ವಿಶ್ವವಿದ್ಯಾಲಯಗಳು ಮುಕ್ತ ಚಿಂತನೆ ಮತ್ತು ಚರ್ಚೆಗೆ ಅವಕಾಶ ನೀಡುವ ಸ್ಥಳಗಳಾಗಿರಬೇಕು ಎಂದು SCBA ಅಧ್ಯಕ್ಷರು ಹೇಳಿದ್ದಾರೆ. ಸಂವಿಧಾನಾತ್ಮಕ ಹುದ್ದೆಯಲ್ಲಿರುವ ವ್ಯಕ್ತಿಯ ಅಭಿಪ್ರಾಯಕ್ಕೆ ವಿದ್ಯಾರ್ಥಿಗಳು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಕಾನೂನು ವೃತ್ತಿಗೆ ಪ್ರವೇಶಿಸುವ ಹಕ್ಕಿನಿಂದ ವಂಚಿಸುವ ಬೆದರಿಕೆ ಹಾಕಬಾರದು ಎಂದು ಅವರು ಒತ್ತಿ ಹೇಳಿದ್ದಾರೆ.

“ಸಂವಿಧಾನಾತ್ಮಕ ಪ್ರಾಧಿಕಾರದೊಂದಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂಬ ಒಂದೇ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಕಾನೂನು ವೃತ್ತಿಗೆ ಪ್ರವೇಶಿಸುವ ಹಕ್ಕನ್ನು ಕಸಿದುಕೊಳ್ಳುವ ಬೆದರಿಕೆ ಹಾಕಲು ಸಾಧ್ಯವಿಲ್ಲ,” ಎಂದು ಹಿರಿಯ ವಕೀಲ ವಿಕಾಸ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com