ಕೇಂದ್ರ ಸಚಿವ ಜೆ.ಪಿ ನಡ್ಡಾ ಆರೋಗ್ಯದಲ್ಲಿ ಏರುಪೇರು: ಏಮ್ಸ್ ಆಸ್ಪತ್ರೆಗೆ ದಾಖಲು

ಸಂಸತ್ ಮುಂಗಾರು ಅಧಿವೇಶನ ಮುಗಿದ ಬಳಿಕ ನಡ್ಡಾ ಅವರಿಗೆ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಏಮ್ಸ್ ಆಸ್ಪತ್ರೆ ಮಾಹಿತಿ ಬಿಡುಗಡೆ ಮಾಡಿದೆ.
JP Nadda
ಜೆ.ಪಿ. ನಡ್ಡಾ
Updated on: 

ನವದೆಹಲಿ: ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡು ಬಂದಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆಂದು ತಿಳಿದುಬಂದಿದೆ.

ಅಸ್ವಸ್ಥತೆ ಕಂಡು ಬಂದ ಹಿನ್ನೆಲೆಯಲ್ಲಿ ಜೆ.ಪಿ ನಡ್ಡಾ (65) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೊರೊನರಿ ಆಂಜಿಯೋಗ್ರಫಿ ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಟ್ಟಿದ್ದಾರೆ ಎಂದು ಏಮ್ಸ್ ಆಸ್ಪತ್ರೆ ಮಾಹಿತಿ ನೀಡಿದೆ.

ಸಂಸತ್ ಮುಂಗಾರು ಅಧಿವೇಶನ ಮುಗಿದ ಬಳಿಕ ನಡ್ಡಾ ಅವರಿಗೆ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಏಮ್ಸ್ ಆಸ್ಪತ್ರೆ ಮಾಹಿತಿ ಬಿಡುಗಡೆ ಮಾಡಿದೆ.

ನಡ್ಡಾ ಅವರನ್ನು ವೈದ್ಯರು ತಪಾಸಣೆ ನಡೆಸಿದ್ದು, ಕೊರೋನರಿ ಆಂಜಿಯೋಗ್ರಫಿ ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಹೆಚ್ಚಿನ ನಿಗಾವಣೆಗಾಗಿ ಏಮ್ಸ್‌ನ ಹೃದ್ರೋಗ ವಿಭಾಗದಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ.

JP Nadda
Watch | ನನ್ನನ್ನು ಅಸ್ಪೃಶ್ಯನಂತೆ ಕಂಡು ಶುದ್ಧೀಕರಣ ಮಾಡಿದರು: ಖರ್ಗೆ ಕಿಡಿ; ನಡ್ಡಾ ಹೇಳಿದ್ದೇನು?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com