

ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಸ್ವಾತಂತ್ರ್ಯ ದಿನಾಚರಣೆಯ ನೇತೃತ್ವ ವಹಿಸಿದ್ದಾರೆ.
ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯನ್ನೂ ಗುರುತಿಸುತ್ತಿದ್ದು, ‘ಯುವ ಶಕ್ತಿ’ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಸಂಕಲ್ಪಕ್ಕೆ ಒತ್ತು ನೀಡಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವು “ನೋ-ಗೋ ಪ್ರದೇಶಗಳನ್ನು” “ಗೋ-ಅಹೆಡ್ ಪ್ರದೇಶಗಳಾಗಿ” ಪರಿವರ್ತಿಸಿದೆ ಎಂದು ಹೇಳಿದರು. ದೇಶದ ಇಂಧನ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.
ಭಾರತದ ಇಂಧನ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಹೆಚ್ಚಿನ ಅಣು ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದರು.
ಕಳೆದ 12 ವರ್ಷಗಳಲ್ಲಿ ದೇಶದ ರಕ್ಷಣಾ ಉತ್ಪಾದನೆ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾದಾಗ, ಜಗತ್ತು ಭಾರತವನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಭಾರತವು ದೊಡ್ಡ ಕನಸುಗಳನ್ನು ಕಾಣುತ್ತಿದ್ದು, ಹೊಸ ಎತ್ತರಗಳನ್ನು ಮುಟ್ಟುವತ್ತ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಕೆಂಪುಕೋಟೆಯ ಕೋಟೆಗೋಡೆಯಿಂದ ‘ವಂದೇ ಮಾತರಂ’ ಮೊಳಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ವಿವಿಧ ಕ್ಷೇತ್ರಗಳು ಮತ್ತು ಹಿನ್ನೆಲೆಗಳಿಂದ ಆಗಮಿಸಿದ 5,000 ವಿಶೇಷ ಅತಿಥಿಗಳು 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ್ದಾರೆ.
80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಭಾಷಣ ಮುನ್ನ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕೆಂಪುಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವ ಮುನ್ನ ಪ್ರಧಾನಿ ಅವರು ರಾಜ್‌ಘಾಟ್‌ಗೆ ತೆರಳಿ ರಾಷ್ಟ್ರಪಿತನಿಗೆ ಗೌರವ ಸಲ್ಲಿಸಿದರು. ವಸಾಹತುಶಾಹಿ ಆಳ್ವಿಕೆಗೆ ಅಂತ್ಯ ಹಾಡಲು ಕಾರಣವಾದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ಧೈರ್ಯ, ತ್ಯಾಗ ಮತ್ತು ಅಚಲ ಬದ್ಧತೆಗೂ ಅವರು ಗೌರವ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದರು. 140 ಕೋಟಿ ಭಾರತೀಯರ ಶಕ್ತಿಯಿಂದ ದೇಶವು ವಿವಿಧ ಕ್ಷೇತ್ರಗಳಲ್ಲಿ ಪ್ರಗತಿಯ ಹೊಸ ಎತ್ತರಗಳನ್ನು ಮುಟ್ಟುತ್ತಿದೆ ಎಂದು ಹೇಳಿದರು.
ವಸಾಹತುಶಾಹಿ ಆಳ್ವಿಕೆಗೆ ಅಂತ್ಯ ಹಾಡಲು ಕಾರಣವಾದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ಧೈರ್ಯ, ತ್ಯಾಗ ಮತ್ತು ಅಚಲ ಬದ್ಧತೆಗೆ ಪ್ರಧಾನಿ ಗೌರವ ಸಲ್ಲಿಸಿದರು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಹಾರ್ದಿಕ ಶುಭಾಶಯಗಳು. ವಸಾಹತುಶಾಹಿ ಆಳ್ವಿಕೆಗೆ ಅಂತ್ಯ ಹಾಡಲು ಕಾರಣವಾದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ಧೈರ್ಯ, ತ್ಯಾಗ ಮತ್ತು ಅಚಲ ಬದ್ಧತೆಯನ್ನು ನಾವು ಕೃತಜ್ಞತೆಯಿಂದ ಸ್ಮರಿಸುತ್ತೇವೆ ಎಂದು ಪ್ರಧಾನಿ ಮೋದಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.