ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಎಸ್‌ಐಟಿಯ ವರದಿಯನ್ನು ಪರಿಶೀಲಿಸಿದ ನಂತರ, ರಾಮ ಮಂದಿರಕ್ಕೆ ಭೇಟಿ ನೀಡುವ ಭಕ್ತರು ನೀಡುವ ದೇಣಿಗೆಗಳ ನಿರ್ವಹಣೆಯಲ್ಲಿ ಸುಧಾರಣೆಗಳಿಗಾಗಿ ನ್ಯಾಯಾಲಯ ಕೆಲವು ನಿರ್ದೇಶನಗಳನ್ನು ನೀಡಬಹುದು ಎಂದು ಪೀಠ ಹೇಳಿದೆ.
Supreme court
ಸುಪ್ರೀಂ ಕೋರ್ಟ್ online desk
Updated on

ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿರುವ ದೇಣಿಗೆ ದುರುಪಯೋಗದ ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ತಾರ್ಕಿಕ ತೀರ್ಮಾನಕ್ಕೆ ಕೊಂಡೊಯ್ಯುವಂತೆ ನ್ಯಾಯಾಲಯ ನೇಮಿಸಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.

ದೇಣಿಗೆ ಕಳ್ಳತನ ಪ್ರಕರಣದ ತನಿಖೆಯಲ್ಲಿ ಆಗಿರುವ ಪ್ರಗತಿಯ ಕುರಿತು ಮುಚ್ಚಿದ ಲಕೋಟೆಯಲ್ಲಿ ಸ್ಥಿತಿ ವರದಿಯನ್ನು ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರಿದ್ದ ಪೀಠ ಎಸ್‌ಐಟಿಗೆ ಸೂಚಿಸಿದೆ.

ತನಿಖೆಯ ಗುಣಾತ್ಮಕ ಸುಧಾರಣೆ ಮತ್ತು ಅದರ ಪಾರದರ್ಶಕತೆಗಾಗಿ ನ್ಯಾಯಾಲಯದ ಮುಂದೆ ವಿವಿಧ ದಾವೆದಾರರು ನೀಡಿದ ಯಾವುದೇ ಸಲಹೆಗಳನ್ನು ವಸ್ತುನಿಷ್ಠವಾಗಿ ಪರಿಗಣಿಸುವಂತೆಯೂ ಪೀಠ ಎಸ್‌ಐಟಿಗೆ ಸೂಚಿಸಿದೆ.

Supreme court
ಹಳದಿ ರೇಷ್ಮೆ ಧೋತಿ: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಡ್ರೆಸ್ ಕೋಡ್

ಎಸ್‌ಐಟಿಯ ವರದಿಯನ್ನು ಪರಿಶೀಲಿಸಿದ ನಂತರ, ರಾಮ ಮಂದಿರಕ್ಕೆ ಭೇಟಿ ನೀಡುವ ಭಕ್ತರು ನೀಡುವ ದೇಣಿಗೆಗಳ ನಿರ್ವಹಣೆಯಲ್ಲಿ ಸುಧಾರಣೆಗಳಿಗಾಗಿ ನ್ಯಾಯಾಲಯ ಕೆಲವು ನಿರ್ದೇಶನಗಳನ್ನು ನೀಡಬಹುದು ಎಂದು ಪೀಠ ಹೇಳಿದೆ.

ಜುಲೈ 27 ರಂದು, ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗದ ತನಿಖೆಗಾಗಿ ಐಜಿಪಿ ಕಿರಣ್ ಎಸ್ ನೇತೃತ್ವದ ನಾಲ್ವರು ಸದಸ್ಯರ ಎಸ್‌ಐಟಿಯನ್ನು ಸ್ಥಾಪಿಸಿರುವುದನ್ನು ಸುಪ್ರೀಂ ಕೋರ್ಟ್ ಗಮನಿಸಿದೆ.

ತನಿಖಾ ತಂಡದಲ್ಲಿ ವಿಧಿವಿಜ್ಞಾನ ಲೆಕ್ಕಪರಿಶೋಧಕರನ್ನು ಸಹ ಸೇರಿಸಿಕೊಳ್ಳುವಂತೆ ಉತ್ತರ ಪ್ರದೇಶ ಸರ್ಕಾರವನ್ನು ನ್ಯಾಯಾಲಯ ಸೂಚಿಸಿದೆ.

"ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ" ಎಂದು ಗಮನಿಸಿದ ಪೀಠ, "ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು" ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿತ್ತು. ಎರಡು ವಾರಗಳಲ್ಲಿ ಸ್ಥಿತಿ ವರದಿಯನ್ನು ಸಲ್ಲಿಸುವಂತೆ ಎಸ್‌ಐಟಿಗೆ ಪೀಠ ನಿರ್ದೇಶನ ನೀಡಿತ್ತು.

ಜುಲೈ 20 ರಂದು, ದೇಣಿಗೆ ದುರುಪಯೋಗದ ಆರೋಪದ ತನಿಖೆಗಾಗಿ ಎಸ್‌ಐಟಿ ಸ್ಥಾಪಿಸುವ ಸಾಧ್ಯತೆಯ ಬಗ್ಗೆ ತಿಳಿಸುವಂತೆ ಪೀಠ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿತ್ತು.

ದೇಣಿಗೆ ಕಳ್ಳತನದ ಆರೋಪದ ಬಗ್ಗೆ ನ್ಯಾಯಯುತ ಮತ್ತು ಕಾಲಮಿತಿಯ ತನಿಖೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಅದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ನೋಟಿಸ್ ನೀಡಿತ್ತು.

ದೇವಾಲಯದಲ್ಲಿ ದೇಣಿಗೆ ನಿರ್ವಹಣೆಯಲ್ಲಿ ಅಕ್ರಮಗಳ ಆರೋಪಗಳು ಹೊರಬಿದ್ದ ನಂತರ, ಆರ್‌ಜೆಡಿ ಸಂಸದ ಸುಧಾಕರ್ ಸಿಂಗ್ ಸೇರಿದಂತೆ ಹಲವಾರು ಅರ್ಜಿದಾರರು ಸಿಬಿಐ ತನಿಖೆ ಮತ್ತು ದೇವಾಲಯದ ಟ್ರಸ್ಟ್‌ನ ಹಣಕಾಸಿನ ವಿಧಿವಿಜ್ಞಾನ ಲೆಕ್ಕಪರಿಶೋಧನೆಯನ್ನು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com