

ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದ ಪಾಲ್ಘರ್‌ನಲ್ಲಿರುವ MIDC ಕೈಗಾರಿಕಾ ಪ್ರದೇಶದ ಫ್ಯಾಕ್ಟರಿಯೊಂದರಲ್ಲಿ ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಭೀಕರ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಇಡೀ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದು, ಫ್ಯಾಕ್ಟರಿಯಲ್ಲಿ ಕಾರ್ಮಿಕರು ಸಿಲುಕಿರುವ ಸಂಶಯ ವ್ಯಕ್ತವಾಗಿದೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಘಟನೆ?
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸರ್ ತಾರಾಪುರ MIDC ಕೈಗಾರಿಕಾ ಪ್ರದೇಶದಲ್ಲಿರುವ 'ವಿರಾಜ್ ಪ್ರೊಫೈಲ್ಸ್' (Viraj Profiles) ಕಂಪನಿಯಲ್ಲಿ ಉತ್ಪಾದನಾ ಪ್ರಕ್ರಿಯೆ ನಡೆಯುತ್ತಿದ್ದ ವೇಳೆ, ಸುಮಾರು 11 ಗಂಟೆಗೆ ಕೆಮಿಕಲ್ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಭಾರಿ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ತೀವ್ರತೆಗೆ ಇಡೀ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜೊತೆಗೆ, ಫ್ಯಾಕ್ಟರಿಯಲ್ಲಿ ಕಾರ್ಮಿಕರು ಸಿಲುಕಿರುವ ಸಂಶಯ ಕೂಡ ವ್ಯಕ್ತವಾಗಿದೆ.