ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲರ ಮುಖಕ್ಕೆ ಮಸಿ ಬಳಿದ ವಿದ್ಯಾರ್ಥಿನಿಯರು!

ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಸೇರಿ ಶಾಲೆಯ ಪ್ರಾಂಶುಪಾಲ ಸುಶೀಲ್ ಕುಮಾರ್ ರಿನ್ವಾ ವಿರುದ್ಧ ಪ್ರತಿಭಟನೆ ನಡೆಸಿದರು.
sexual harassment
ಲೈಂಗಿಕ ಕಿರುಕುಳ (ಸಾಂಕೇತಿಕ ಚಿತ್ರ)online desk
Updated on

ಅಜ್ಮೀರ್: ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರು ಸೋಮವಾರ ತಮ್ಮ ಶಾಲೆಯ ಪ್ರಾಂಶುಪಾಲರ ಮುಖಕ್ಕೆ ಮಸಿ ಬಳಿದು, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಸೇರಿ ಶಾಲೆಯ ಪ್ರಾಂಶುಪಾಲ ಸುಶೀಲ್ ಕುಮಾರ್ ರಿನ್ವಾ ವಿರುದ್ಧ ಪ್ರತಿಭಟನೆ ನಡೆಸಿದರು.

"ವಿದ್ಯಾರ್ಥಿನಿ, ಆರೋಪಿಯ ಮುಖಕ್ಕೆ ಶಾಯಿ ಬಳಿದು ಪ್ರತಿಭಟನೆ ನಡೆಸಿದರು. ಪೊಲೀಸರು ಸ್ಥಳಕ್ಕೆ ತಲುಪಿ ಆರೋಪಿಯನ್ನು ಬಂಧಿಸಿದರು" ಎಂದು ಪುಷ್ಕರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅಶೋಕ್ ಬಿಶು ಹೇಳಿದರು.

sexual harassment
ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆದರಿಕೆ ಆರೋಪ: ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್ ಅಭಿಷೇಕ್ ಪೊರೆಲ್ ಬಂಧನ!

ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಆರೋಪಿಯ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಲಾಗುವುದು ಎಂದು ಬಿಶು ತಿಳಿಸಿದ್ದಾರೆ.

ಆರೋಪಿ ಪ್ರಾಂಶುಪಾಲರ ವಿರುದ್ಧ ಹಿರಿಯ ಅಧಿಕಾರಿಗಳಿಗೆ ವರದಿ ಕಳುಹಿಸಲಾಗಿದೆ ಎಂದು ಅಜ್ಮೀರ್‌ನ ಮುಖ್ಯ ಜಿಲ್ಲಾ ಶಿಕ್ಷಣಾಧಿಕಾರಿ ಗೋವಿಂದ್ ನಾರಾಯಣ್ ಶರ್ಮಾ ಅವರು ಹೇಳಿದ್ದಾರೆ.

"ಪ್ರತಿಭಟನೆಯ ಮಾಹಿತಿಯ ಬಂದ ನಂತರ ನಾನು ಶಾಲೆಗೆ ಅಧಿಕಾರಿಯನ್ನು ಕಳುಹಿಸಿದ್ದೇನೆ. ಪ್ರಾಂಶುಪಾಲರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಹುಡುಗಿಯರ ಹೇಳಿಕೆಗಳನ್ನು ಅಧಿಕಾರಿ ದಾಖಲಿಸಿದ್ದಾರೆ. ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳಲು ವರದಿ ಹಿರಿಯ ಅಧಿಕಾರಿಗಳಿಗೆ ನೀಡಲಾಗಿದೆ" ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com