Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ (ಅಕ್ರಮ ಆಸ್ತಿ) ಪ್ರಕರಣದ ವಿಚಾರಣೆಯನ್ನು ಮುಂದುವರಿಸದಂತೆ ಅಲಹಾಬಾದ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
Supreme court
ಸುಪ್ರೀಂ ಕೋರ್ಟ್ online desk
Updated on

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

ಹೌದು.. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೋಮವಾರ ಸುಪ್ರೀಂ ಕೋರ್ಟ್‌ ನಿರಾಳತೆ ನೀಡಿದ್ದು, ಅವರ ವಿರುದ್ಧದ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ (ಅಕ್ರಮ ಆಸ್ತಿ) ಪ್ರಕರಣದ ವಿಚಾರಣೆಯನ್ನು ಮುಂದುವರಿಸದಂತೆ ಅಲಹಾಬಾದ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವರದಿಯನ್ನು ಅಲಹಾಬಾದ್ ಹೈಕೋರ್ಟ್ ಮುಂದೆ ಸಲ್ಲಿಸದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೂ (ED) ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

Supreme court
'ಮೋದಿ ಜೀ, ನಿಮ್ಮ ಪರೀಕ್ಷಾ ಸಂಸ್ಥೆ ಏನು ಮಾಡಿದೆ ನೋಡಿ': UGC-NET ಮರುಪರೀಕ್ಷೆ ಘೋಷಣೆ ಬೆನ್ನಲ್ಲೇ ರಾಹುಲ್ ಗಾಂಧಿ ವಾಗ್ದಾಳಿ

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ಪೀಠವು ರಾಹುಲ್ ಗಾಂಧಿ ಪರ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ವಾದಗಳನ್ನು ಪರಿಗಣಿಸಿತು. ಬಳಿಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಕರ್ನಾಟಕ ನಿವಾಸಿ ಎಸ್. ವಿಗ್ನೇಶ್ ಶಿಶಿರ್, ಸಿಬಿಐ ಮತ್ತು ಇಡಿಗೆ ನೋಟಿಸ್ ಜಾರಿ ಮಾಡಿತು.

ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಪೀಠ ನಡೆಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com