

ನವದೆಹಲಿ: ದೆಹಲಿಯ ಇಂಧನ ಕೇಂದ್ರವೊಂದರಲ್ಲಿ ಟ್ರಕ್‌ನ ಸಿಎನ್‌ಜಿ ಸಿಲಿಂಡರ್‌ಗೆ ಅನಿಲ ತುಂಬಿಸುವಾಗ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ದೆಹಲಿಯ ಟಿಕ್ರಿ ಕಲನ್ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪಶ್ಚಿಮ ದೆಹಲಿಯ ಬಾಬಾ ಹರಿದಾಸ್ ಕಾಲೋನಿಯ ನಿವಾಸಿ ಮನೀಶ್ ಎಂದು ಗುರುತಿಸಲಾಗಿದೆ. ಅವರಿಗೆ 25 ವರ್ಷ ವಯಸ್ಸಾಗಿತ್ತು.
ದೆಹಲಿಯ ಹೊರವಲಯ ಡಿಸಿಪಿ (DCP)ಅವರ ಪ್ರಕಾರ, ಗಾಯಗೊಂಡಿರುವ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯ ದೊಡ್ಡ ತಂಡಗಳನ್ನು ನಿಯೋಜಿಸಲಾಗಿದೆ.
ಟ್ರಕ್‌ನ ಸಿಎನ್‌ಜಿ ಸಿಲಿಂಡರ್‌ಗೆ ಅನಿಲ ತುಂಬಿಸುತ್ತಿದ್ದ ವ್ಯಕ್ತಿಯೇ ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಡಿಸಿಪಿ ಹೇಳಿದ್ದಾರೆ.
ಸ್ಫೋಟದ ಸಮಯದಲ್ಲಿ ಹತ್ತಿರದಲ್ಲೇ ನಿಂತಿದ್ದು ಗಾಯಗೊಂಡ ಆರು ಮಂದಿಯನ್ನು ಚಿಕಿತ್ಸೆಗಾಗಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.