ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!

ಆರೋಪಿ ಯುವಕ, ಬಾಲಕಿಯನ್ನು ಆಕೆಯ ಮನೆಯಿಂದ ಹತ್ತಿರದ ಜಮೀನಿಗೆ ಕರೆದೊಯ್ದು, ಲೈಂಗಿಕ ದೌರ್ಜನ್ಯ ಎಸಗಿ ನಂತರ ಕೊಂದಿದ್ದಾನೆ ಎಂದು ಪುಣೆ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಸಿಂಗ್ ಗಿಲ್ ತಿಳಿಸಿದ್ದಾರೆ.
Nine-year-old girl sexually assaulted, murdered in Pune
ಸಾಂದರ್ಭಿಕ ಚಿತ್ರ
Updated on

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಜುನ್ನಾರ್ ತಹಸಿಲ್‌ನ ಪಿಂಪಲ್‌ವಾಡಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಈ ಘೋರ ಕೃತ್ಯ ನಡೆದಿದ್ದು, ಆರೋಪಿ 25 ವರ್ಷದ ಯುವಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿ ಯುವಕ, ಬಾಲಕಿಯನ್ನು ಆಕೆಯ ಮನೆಯಿಂದ ಹತ್ತಿರದ ಜಮೀನಿಗೆ ಕರೆದೊಯ್ದು, ಲೈಂಗಿಕ ದೌರ್ಜನ್ಯ ಎಸಗಿ ನಂತರ ಕೊಂದಿದ್ದಾನೆ ಎಂದು ಪುಣೆ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಸಿಂಗ್ ಗಿಲ್ ತಿಳಿಸಿದ್ದಾರೆ.

Nine-year-old girl sexually assaulted, murdered in Pune
ಬೆಂಗಳೂರು: ಬಾಡಿಗೆಗಿದ್ದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; 60 ವರ್ಷದ ಮನೆ ಮಾಲೀಕನ ಬಂಧನ

"ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಗಿಲ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com