ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!

ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಈ ಮಹತ್ವದ ಉಪಕ್ರಮ ಜಾರಿಗೆ ತರಲಾಗುತ್ತಿದೆ ಎಂದ ಸಿಎಂ ವಿಜಯ್, ವೈದ್ಯಕೀಯ ಚಿಕಿತ್ಸೆಯು ಮೂಲಭೂತ ಹಕ್ಕು, ಸವಲತ್ತು ಅಲ್ಲ ಎಂದು ಒತ್ತಿ ಹೇಳಿದ್ದಾರೆ.
Tamil Nadu CM Vijay
ತಮಿಳುನಾಡು ಸಿಎಂ ವಿಜಯ್
Updated on

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಬುಧವಾರ ರಾಜ್ಯದ ಜನತೆಗೆ ಬಂಪರ್ ಗಿಫ್ಟ್ ನೀಡಿದ್ದು, ಮುಖ್ಯಮಂತ್ರಿಗಳ ಸಮಗ್ರ ಆರೋಗ್ಯ ವಿಮಾ ಯೋಜನೆಯಡಿ ವಾರ್ಷಿಕ ವಿಮಾ ಮೊತ್ತವನ್ನು 5 ಲಕ್ಷ ರೂ.ಗಳಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.

ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಈ ಮಹತ್ವದ ಉಪಕ್ರಮ ಜಾರಿಗೆ ತರಲಾಗುತ್ತಿದೆ ಎಂದ ಸಿಎಂ ವಿಜಯ್, ವೈದ್ಯಕೀಯ ಚಿಕಿತ್ಸೆಯು ಮೂಲಭೂತ ಹಕ್ಕು, ಸವಲತ್ತು ಅಲ್ಲ ಎಂದು ಒತ್ತಿ ಹೇಳಿದ್ದಾರೆ. ಆದಾಯ ಅಥವಾ ಸ್ಥಳವನ್ನು ಲೆಕ್ಕಿಸದೆ ಗುಣಮಟ್ಟದ ಆರೋಗ್ಯ ರಕ್ಷಣೆಗೆ ಇರುವ ಅಡೆತಡೆಗಳನ್ನು ತೆಗೆದುಹಾಕುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದ್ದಾರೆ.

ಮಹಿಳಾ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ

ಇನ್ನು ತಮಿಳುನಾಡಿನ ಮಹಿಳಾ ಸರ್ಕಾರಿ ನೌಕರರಿಗೂ ಭರ್ಜರಿ ಗಿಫ್ಟ್ ನೀಡಿರುವ ವಿಜಯ್ ಅವರು, ಮೂರನೇ ಮಗುವಿನ ಹೆರಿಗೆ ರಜೆಯನ್ನು 12 ವಾರಗಳಿಂದ 365 ದಿನಗಳವರೆಗೆ ವಿಸ್ತರಿಸುವುದಾಗಿ ಘೋಷಿಸಿದ್ದಾರೆ.

Tamil Nadu CM Vijay
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಪ್ರಸ್ತುತ, ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ಎರಡು ಮಕ್ಕಳಿಗೆ ಮಾತ್ರ 365 ದಿನಗಳ ಹೆರಿಗೆ ರಜೆ ನೀಡಲಾಗುತ್ತಿದ್ದು, ಎರಡು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ 12 ವಾರಗಳವರೆಗೆ ಹೆರಿಗೆ ರಜೆ ನೀಡಲಾಗುತ್ತಿದೆ. ಈಗ ಮೂರನೇ ಮಗು ಆದ್ರೂ ಅವರಿಗೆ 1 ವರ್ಷ ಹೆರಿಗೆ ರಜೆ ಸಿಗಲಿದೆ.

ತಮಿಳುನಾಡು ಸರ್ಕಾರವು ಸಾಮಾಜಿಕ ಕಲ್ಯಾಣ ಮತ್ತು ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವ ಕಲ್ಯಾಣ-ಆಧಾರಿತ ಆಡಳಿತವಾಗಿರುವುದರಿಂದ, ಪ್ರಸ್ತುತ ಮಹಿಳಾ ಸರ್ಕಾರಿ ನೌಕರರ ಮೂರನೇ ಮಗುವಿಗೆ ನೀಡಲಾಗುವ ಹೆರಿಗೆ ರಜೆಯನ್ನು 12 ವಾರಗಳಿಂದ 365 ದಿನಗಳಿಗೆ ಹೆಚ್ಚಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ತಮ್ಮ ಇಲಾಖೆಗೆ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಿದ ಸಂದರ್ಭದಲ್ಲಿ ಮಾನವ ಸಂಪನ್ಮೂಲ ನಿರ್ವಹಣಾ ಸಚಿವ ಡಿ. ಶರತ್‌ಕುಮಾರ್ ರಾಜ್ಯ ವಿಧಾನಸಭೆಯಲ್ಲಿ, ತಮಿಳುನಾಡು ಸರ್ಕಾರವು ಸಾಮಾಜಿಕ ಕಲ್ಯಾಣ ಮತ್ತು ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವ ಕಲ್ಯಾಣ-ಆಧಾರಿತ ಆಡಳಿತವಾಗಿದೆ. ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ಮೂರನೇ ಮಗು ಆದರೆ ಪ್ರಸ್ತುತ ನೀಡಲಾಗುವ ಹೆರಿಗೆ ರಜೆಯನ್ನು 12 ವಾರಗಳಿಂದ 365 ದಿನಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com