1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಜೈಲಿನಲ್ಲೇ ನಿಧನ!

ಡಿಸೆಂಬರ್ 17, 2018 ರಂದು ದೆಹಲಿ ಹೈಕೋರ್ಟ್ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
Former Congress MP Sajjan Kumar, Convicted In 1984 Anti-Sikh Riots Case, Dies
ಸಜ್ಜನ್ ಕುಮಾರ್
Updated on

ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ನಂತರ 1984ರ ನವಂಬರ್ 1 ರಂದು ದೆಹಲಿಯಲ್ಲಿ ನಡೆದ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಅವರ ಆರೋಗ್ಯ ತೀವ್ರ ಹದಗೆಟ್ಟ ನಂತರ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಕಾಂಗ್ರೆಸ್ ನಾಯಕ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಸಜ್ಜನ್ ಕುಮಾರ್ ಅವರಿಗೆ 80 ವರ್ಷ ವಯಸ್ಸಾಗಿತ್ತು.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ, 1984, ನವೆಂಬರ್ 1 ಮತ್ತು 2 ರಂದು ಪಾಲಂ ಕಾಲೋನಿ ಪ್ರದೇಶದಲ್ಲಿ ನಡೆದ ಗಲಭೆಯ ಸಂದರ್ಭದಲ್ಲಿ ಐದು ಜನರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಸಜ್ಜನ್ ಕುಮಾರ್ ತಪ್ಪಿತಸ್ಥ ಎಂದು ಹೈಕೋರ್ಟ್ ಘೋಷಿಸಿತ್ತು.

ಡಿಸೆಂಬರ್ 17, 2018 ರಂದು ದೆಹಲಿ ಹೈಕೋರ್ಟ್ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

Former Congress MP Sajjan Kumar, Convicted In 1984 Anti-Sikh Riots Case, Dies
1984ರ ಸಿಖ್ ವಿರೋಧಿ ದಂಗೆ: ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಗೆ ಜೀವವಾಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ!

ಶಿಕ್ಷೆಯನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಮೇಲ್ಮನವಿ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com