ವಿದ್ಯಾರ್ಥಿನಿಯರ ಜೊತೆ ಡ್ಯಾಂನಲ್ಲಿ ಸ್ನಾನ: ರಾಜಸ್ಥಾನ ಸರ್ಕಾರಿ ಶಾಲೆ ಪ್ರಾಂಶುಪಾಲ ಅಮಾನತು, Video

ರಾಜಸ್ಥಾನದ ಅಳ್ವಾರ್ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರ ಪ್ರಾಂಶುಪಾಲರು ವಿದ್ಯಾರ್ಥಿನಿಯರೊಂದಿಗೆ ಡ್ಯಾಂನಲ್ಲಿ ಸ್ನಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಲಾಗಿದೆ.
Rajasthan principal suspended after dam-bathing with girl students
ವಿದ್ಯಾರ್ಥಿನಿಯರೊಂದಿಗೆ ಪ್ರಾಂಶುಪಾಲ ಸ್ನಾನ
Updated on

ಜೈಪುರ: ವಿದ್ಯಾರ್ಥಿನಿಯರ ಜೊತೆ ಡ್ಯಾಂನಲ್ಲಿ ಸ್ನಾನ ಮಾಡುತ್ತಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರ ಪ್ರಾಂಶುಪಾಲನನ್ನು ಅಮಾನತು ಮಾಡಿರುವ ಘಟನೆ ರಾಜಸ್ತಾನದಲ್ಲಿ ನಡೆದಿದೆ.

ರಾಜಸ್ಥಾನದ ಅಳ್ವಾರ್ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರ ಪ್ರಾಂಶುಪಾಲರು ವಿದ್ಯಾರ್ಥಿನಿಯರೊಂದಿಗೆ ಡ್ಯಾಂನಲ್ಲಿ ಸ್ನಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಲಾಗಿದೆ.

ಥಾನಾಗಾಜಿ ಪ್ರದೇಶದ ರೌಬಾವಿ ಪಡಕ್ ಛಾಪ್ಲಿ ಸರ್ಕಾರಿ ಹಿರಿಯ ಪ್ರೌಢಶಾಲೆಯ ಪ್ರಾಂಶುಪಾಲ ಲಾಲ್ ಚಂದ್ ಮೀಣಾ ಅವರನ್ನು ಬಿಕಾನೇರ್‌ನ ಮಾಧ್ಯಮಿಕ ಶಿಕ್ಷಣ ನಿರ್ದೇಶನಾಲಯ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.

Rajasthan principal suspended after dam-bathing with girl students
ದೆಹಲಿ: ರಕ್ಷಣಾ ಸಚಿವಾಲಯದ ಗರ್ಭಿಣಿ ಅಧಿಕಾರಿ ಆತ್ಮಹತ್ಯೆ; ಪತಿ, ಮಾವ, ಅತ್ತೆಯಿಂದ ಕಿರುಕುಳದ ಆರೋಪ!

ಶನಿವಾರ ಹೊರಡಿಸಲಾದ ಅಮಾನತು ಆದೇಶದ ಪ್ರಕಾರ, ಮೀಣಾ ಹಾಗೂ ಶಾಲೆಯ ವಿದ್ಯಾರ್ಥಿನಿಯರನ್ನು ಒಳಗೊಂಡಿರುವ ಆಕ್ಷೇಪಾರ್ಹ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.

ಪ್ರಾಂಶುಪಾಲರ ಈ ವರ್ತನೆಯು ಪ್ರಾಥಮಿಕವಾಗಿ ಸರ್ಕಾರಿ ನೌಕರರಿಗೆ ನಿಗದಿಪಡಿಸಿರುವ ಸೇವಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ನಾಗರಿಕ ಸೇವೆಗಳ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1958ರ ನಿಯಮ 13(1)ರ ಅಡಿಯಲ್ಲಿ ಮೀಣಾ ವಿರುದ್ಧ ಇಲಾಖಾ ತನಿಖೆಯನ್ನೂ ಆರಂಭಿಸಲಾಗಿದೆ.

ಅಮಾನತು ಅವಧಿಯಲ್ಲಿ ಮೀಣಾ ಅವರ ಕೇಂದ್ರ ಕಚೇರಿ ಬಿಕಾನೇರ್‌ನ ಮಾಧ್ಯಮಿಕ ಶಿಕ್ಷಣ ನಿರ್ದೇಶನಾಲಯದಲ್ಲೇ ಇರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com