ಹತ್ರಾಸ್‌ನಲ್ಲಿ ಅಮಾನವೀಯ ಕೃತ್ಯ: 16 ವರ್ಷದ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ, ಗರ್ಭಿಣಿ.. 70ರ ಅಜ್ಜ ಅರೆಸ್ಟ್!

ಸಂತ್ರಸ್ತ ಬಾಲಕಿ ಸುಮಾರು ಮೂರು ತಿಂಗಳ ಕಾಲ ತನ್ನ ಅಜ್ಜನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಗಿ ಆರೋಪಿಸಿದ್ದಾಳೆ.
70 year old impregnates 16-year-old granddaughter
16 ವರ್ಷದ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ (ಸಾಂದರ್ಭಿಕ ಚಿತ್ರ)
Updated on

ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ 16 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇಲೆ 70 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಸಂತ್ರಸ್ತ ಬಾಲಕಿ ಸುಮಾರು ಮೂರು ತಿಂಗಳ ಕಾಲ ತನ್ನ ಅಜ್ಜನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಗಿ ಆರೋಪಿಸಿದ್ದಾಳೆ. ಸದ್ಯ ಆಕೆ ಎರಡೂವರೆ ತಿಂಗಳ ಗರ್ಭಿಣಿಯಾಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಬಾಲಕಿಯ ತಾಯಿ ಮೃತಪಟ್ಟಿದ್ದು, ಆಕೆ ತಂದೆ ಹಾಗೂ ಅಜ್ಜನೊಂದಿಗೆ ವಾಸಿಸುತ್ತಿದ್ದಳು. ತಂದೆ ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಮನೆಯಲ್ಲಿ ಬಾಲಕಿ ಒಂಟಿಯಾಗಿರುವುದನ್ನು ಗಮನಿಸುತ್ತಿದ್ದ ಅಜ್ಜ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

ಶನಿವಾರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯನ್ನು ವೈದ್ಯರ ಬಳಿ ತಪಾಸಣೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಆಕೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.

70 year old impregnates 16-year-old granddaughter
ವಿದ್ಯಾರ್ಥಿನಿಯರ ಜೊತೆ ಡ್ಯಾಂನಲ್ಲಿ ಸ್ನಾನ: ರಾಜಸ್ಥಾನ ಸರ್ಕಾರಿ ಶಾಲೆ ಪ್ರಾಂಶುಪಾಲ ಅಮಾನತು, Video

ಪೊಲೀಸರಿಗೆ ನೀಡಿದ ದೂರಿನಲ್ಲಿ, ಸುಮಾರು ಮೂರು ಅಥವಾ ನಾಲ್ಕು ತಿಂಗಳ ಹಿಂದೆ ತಾನು ತನ್ನ ಮಾವನ ಮನೆಯಿಂದ ಸಿಕಂದ್ರಾ ರಾವ್‌ಗೆ ಮರಳಿದ್ದಾಗಿ ಬಾಲಕಿ ತಿಳಿಸಿದ್ದಾಳೆ. ಜೂನ್ 20ರಂದು ತನ್ನ ಅಜ್ಜ ನಿಜಾಮುದ್ದೀನ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಬಳಿಕವೂ ಹಲವು ಬಾರಿ ಅದನ್ನು ಮುಂದುವರಿಸಿದ್ದಾಗಿ ಆರೋಪಿಸಿದ್ದಾಳೆ.

ಸರ್ಕಲ್ ಆಫೀಸರ್ ಅಮಿತ್ ಪಾಠಕ್ ಅವರ ಪ್ರಕಾರ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಪರೀಕ್ಷೆಯಲ್ಲಿ ಆಕೆ ಎರಡೂವರೆ ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿಜಾಮುದ್ದೀನ್‌ನನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com