Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video

ಛತ್ತೀಸ್ ಗಢದ ಮುಂಗೆಲಿಯ ಪಂಡರಭಟ್ಟ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಈ ಪ್ರದೇಶದಲ್ಲಿ ಗುಡುಗು ಸಹಿತ ಮಳೆ ಸುರಿಯುತ್ತಿದ್ದ ವೇಳೆ ಮಹಿಳೆ ಮನೆಗೆ ತೆರಳುತ್ತಿದ್ದರು.
Woman Struck by Lightning While Returning Home
ಸಿಡಿಲು ಬಡಿದು ಮಹಿಳೆ ಸಾವು
Updated on

ಛತ್ತೀಸ್‌ಗಢ: ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಮಹಿಳೆ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಛತ್ತೀಸ್ ಘಡದಲ್ಲಿ ನಡೆದಿದೆ.

ಛತ್ತೀಸ್ ಗಢದ ಮುಂಗೆಲಿಯ ಪಂಡರಭಟ್ಟ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಈ ಪ್ರದೇಶದಲ್ಲಿ ಗುಡುಗು ಸಹಿತ ಮಳೆ ಸುರಿಯುತ್ತಿದ್ದ ವೇಳೆ ಗೀತಾ ಬಾಯಿ ಎಂಬ ಮಹಿಳೆ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಸಿಡಿಲು ಬಡಿದ ಪರಿಣಾಮ ಅವರು ಕೆಳಗೆ ಬಿದ್ದು ಅಸ್ವಸ್ಥರಾಗಿದ್ದಾರೆ.

ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಮಹಿಳೆಯ ನೆರವಿಗೆ ಧಾವಿಸಿ, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಆರೋಗ್ಯ ಸ್ಥಿತಿ ಹಾಗೂ ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Woman Struck by Lightning While Returning Home
Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

ಗುಡುಗು-ಸಿಡಿಲು ಸಹಿತ ಮಳೆಯ ಸಂದರ್ಭದಲ್ಲಿ ಜನರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ವಿಶೇಷವಾಗಿ ತೆರೆದ ಪ್ರದೇಶಗಳು, ಮರಗಳ ಕೆಳಗೆ ಹಾಗೂ ಸಿಡಿಲಿನ ಅಪಾಯವಿರುವ ಸ್ಥಳಗಳಲ್ಲಿ ನಿಲ್ಲದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com