ತೆಲಂಗಾಣದ ಸೂರ್ಯಾಪೇಟೆ ಬಳಿ ಬಸ್ ಅಪಘಾತ: ಆರು ಪ್ರಯಾಣಿಕರು ಸಾವು; 20 ಮಂದಿಗೆ ಗಂಭೀರ ಗಾಯ; Video

20 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಕ್ಷಿಸಿ ಸ್ಥಳೀಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
Accident bus
ಅಪಘಾತಕ್ಕೀಡಾದ ಬಸ್ಸು
Updated on

ತೆಲಂಗಾಣದ ಸೂರ್ಯಾಪೇಟೆ ಬಳಿ ಇಂದು ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಬಸ್ ಪ್ರಯಾಣಿಕರು ಮೃತಪಟ್ಟಿದ್ದಾರೆ. ವೇಗವಾಗಿ ಸಂಚರಿಸುತ್ತಿದ್ದ ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

20 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಕ್ಷಿಸಿ ಸ್ಥಳೀಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಅಪಘಾತ ಸಂಭವಿಸಿದಾಗ ಬಸ್‌ನಲ್ಲಿ 42 ಪ್ರಯಾಣಿಕರಿದ್ದರು. ಅವರು ಹೈದರಾಬಾದ್‌ನಿಂದ ವಿಜಯವಾಡ ಮಾರ್ಗವಾಗಿ ಏಲೂರಿಗೆ ಪ್ರಯಾಣಿಸುತ್ತಿದ್ದರು. ಬೆಳಗಿನ ಸುಮಾರು 5 ಗಂಟೆಗೆ ಅಪಘಾತ ಸಂಭವಿಸಿದೆ. ಗಾಯಗೊಂಡವರ ಪೈಕಿ ಕೆಲವರನ್ನು ಕೊಡಾಡ್ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹೆಚ್ಚಿನ ವಿವರಗಳು ನಿರೀಕ್ಷಿಸಲಾಗುತ್ತಿದೆ.

ಸಿಎಂ ರೇವಂತ್ ರೆಡ್ಡಿ ಸಂತಾಪ; ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚನೆ

ಭೀಕರ ರಸ್ತೆ ಅಪಘಾತದ ಬಗ್ಗೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಮುಖ್ಯ ಕಾರ್ಯದರ್ಶಿ ಸಂಜಯ್ ಜಾಜು ಅವರಿಗೆ ಸೂಚಿಸಿದ್ದಾರೆ. ಸಂತ್ರಸ್ತರು ಹಾಗೂ ಅವರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ನೆರವು ಒದಗಿಸುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನೀರಾವರಿ ಸಚಿವ ಎನ್. ಉತ್ತಮ್ ಕುಮಾರ್ ರೆಡ್ಡಿ ಕೂಡ ಅಪಘಾತದ ಬಗ್ಗೆ ಆಘಾತ ವ್ಯಕ್ತಪಡಿಸಿ, ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ತ್ವರಿತ ಹಾಗೂ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಮತ್ತು ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲು ಜಿಲ್ಲಾ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com