ರಕ್ಷಾಬಂಧನ ಸಂಭ್ರಮದಲ್ಲಿ ಭೀಕರ ಕಾಲ್ತುಳಿತ: ಬಿಜೆಪಿ ಮೇಯರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಓರ್ವ ಮಹಿಳೆ ಸಾವು, ಹಲವರಿಗೆ ಗಾಯ!

ಬರೇಲಿಯಲ್ಲಿ ಬಿಜೆಪಿ ಮೇಯರ್ ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಭಾರಿ ನೂಕುನುಗ್ಗಲು ಉಂಟಾಗಿದ್ದು, ಒಬ್ಬ ಮಹಿಳೆ ಮೃತಪಟ್ಟು, ಮೂವರು ಗಾಯಗೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ. ಉಚಿತ ಉಡುಗೊರೆಗಳನ್ನು ವಿತರಿಸುವ ವೇಳೆ ಸಂಭವಿಸಿದ ಈ ದುರಂತದ ಸಂಪೂರ್ಣ ವಿವರ ಇಲ್ಲಿದೆ:
Stampede at BJP Mayors Raksha Bandhan event in Bareilly
ರಕ್ಷಾಬಂಧನ ಸಂಭ್ರಮದಲ್ಲಿ ಭೀಕರ ಕಾಲ್ತುಳಿತOnline Desk
Updated on

ಬರೇಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬರೇಲಿಯಲ್ಲಿ ಬಿಜೆಪಿ ಮೇಯರ್ ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಭಾರಿ ನೂಕುನುಗ್ಗಲು ಉಂಟಾಗಿದ್ದು, ಒಬ್ಬ ಮಹಿಳೆ ಮೃತಪಟ್ಟು, ಮೂವರು ತೀವ್ರವಾಗಿ ಗಾಯಗೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ. ಉಚಿತ ಉಡುಗೊರೆಗಳನ್ನು ವಿತರಿಸುವ ವೇಳೆ ಸಂಭವಿಸಿದ ಈ ದುರಂತದ ಸಂಪೂರ್ಣ ವಿವರ ಇಲ್ಲಿದೆ:

ಏನಿದು ಘಟನೆ?

ಬರೇಲಿಯ ಬಿಜೆಪಿ ಮೇಯರ್ ಉಮೇಶ್ ಗೌತಮ್ ಅವರು ರಕ್ಷಾ ಬಂಧನ ಹಬ್ಬದ ಅಂಗವಾಗಿ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದರು. ಇನ್ನು, ಕಾರ್ಯಕ್ರಮದಲ್ಲಿ ಭಾಗವಹಿಸುವ ಮಹಿಳೆಯರಿಗೆ ಉಚಿತವಾಗಿ ಸೀರೆ ಹಾಗೂ ಉಡುಗೊರೆಗಳನ್ನು ವಿತರಿಸಲಾಗುವುದು ಎಂದು ಪ್ರಕಟಿಸಲಾಗಿತ್ತು. ಇದನ್ನು ನಂಬಿ 20 ಸಾವಿರಕ್ಕೂ ಅಧಿಕ ಮಹಿಳೆಯರು ಭಾಗವಹಿಸಿದ್ದರು ಎನ್ನಲಾಗಿದೆ. ಇನ್ನು, ಕಾರ್ಯಕ್ರಮದ ಸಂಘಟಕರು ಉಡುಗೊರೆ ವಿತರಣೆಯನ್ನು ಆರಂಭಿಸುತ್ತಿದ್ದಂತೆ, ಸೀರೆಗಳನ್ನು ಪಡೆಯಲು ಮಹಿಳೆಯರು ಮುಗಿಬಿದ್ದರು. ಸ್ಥಳದಲ್ಲಿ ಸೂಕ್ತ ಭದ್ರತೆ ಮತ್ತು ಬ್ಯಾರಿಕೇಡ್ ವ್ಯವಸ್ಥೆ ಇಲ್ಲದ ಕಾರಣ ಜನಸಂದಣಿಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಈ ವೇಳೆ, ಪರಸ್ಪರ ತಳ್ಳಾಟದ ನಡುವೆ ಮುಂಭಾಗದಲ್ಲಿದ್ದ ಹಲವು ಮಹಿಳೆಯರು ಕೆಳಗೆ ಬಿದ್ದರು. ಅವರ ಮೇಲೆ ಉಳಿದವರು ನುಗ್ಗಿದ್ದರಿಂದ ಭೀಕರ ಕಾಲ್ತುಳಿತದ ಪರಿಸ್ಥಿತಿ ನಿರ್ಮಾಣವಾಯಿತು ಎನ್ನಲಾಗಿದೆ.

ಇನ್ನು, ಕಾಲ್ತುಳಿತದಲ್ಲಿ ಸಿಲುಕಿ ಉಸಿರುಗಟ್ಟಿ ಸ್ಥಳದಲ್ಲೇ ಓರ್ವ ಮಹಿಳೆ ಧೃತಪಟ್ಟಿದ್ದಾರೆ. ಇನ್ನು, ಮೃತ ಮಹಿಳೆಯನ್ನು ಮಧು ಸಿಂಗ್ ಎಂದು ಗುರುತಿಸಲಾಗಿದ್ದು, ಅವರು ಬಿಜೆಪಿ ಪೂರ್ವ ಮಂಡಲ ಅಧ್ಯಕ್ಷ ರಾಜನ್ ತೋಮರ್ ಅವರ ಚಿಕ್ಕಮ್ಮ ಎಂದು ಹೇಳಲಾಗಿದೆ. ಮಧು ಗಾಯಗೊಂಡ ನಂತರ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತರಲಾಯಿತು. ಆದರು ಕೂಡ ಬದುಕಿಸಲು ಹಾಗಿಲ್ಲ.

Stampede at BJP Mayors Raksha Bandhan event in Bareilly
ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಜೊತೆಗೆ, ತೀವ್ರವಾಗಿ ಗಾಯಗೊಂಡ ಮೂವರು ಮಹಿಳೆಯರನ್ನು ಪೊಲೀಸರು ಮತ್ತು ಸ್ಥಳೀಯರು ತಕ್ಷಣವೇ ಹತ್ತಿರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಏತನ್ಮಧ್ಯೆ, ಘಟನೆಯ ನಂತರ ಕಾರ್ಯಕ್ರಮದ ಸ್ಥಳದಲ್ಲಿ ಭಾರಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಮೇಯರ್ ಮತ್ತು ಕಾರ್ಯಕ್ರಮದ ಸಂಘಟಕರ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇಷ್ಟೊಂದು ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸುವಾಗ ಕನಿಷ್ಠ ಪೊಲೀಸ್ ಭದ್ರತೆ ಮತ್ತು ವೈದ್ಯಕೀಯ ತುರ್ತು ಸೌಲಭ್ಯಗಳನ್ನು ಕಲ್ಪಿಸದ ನಿರ್ಲಕ್ಷ್ಯವೇ ಈ ಸಾವಿಗೆ ನೇರ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Stampede at BJP Mayors Raksha Bandhan event in Bareilly
ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com