ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಡ್ರಾಪ್ ನೀಡುವ ನೆಪದಲ್ಲಿ ಬಸ್ ಹತ್ತಿಸಿಕೊಂಡು 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!

ಆಗಸ್ಟ್‌ 4ರಂದು ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ಬಸ್‌ನಲ್ಲಿ ತೆರಳುತ್ತಿದ್ದ ಬಾಲಕಿ, ಮಾರ್ಗ ಮಧ್ಯೆ ತಪ್ಪಾಗಿ ಬೇರೆ ನಿಲ್ದಾಣದಲ್ಲಿ ಇಳಿದಿದ್ದಳು ಎನ್ನಲಾಗಿದೆ.
File photo
ಅತ್ಯಾಚಾರ (ಸಾಂದರ್ಭಿಕ ಚಿತ್ರ)
Updated on

ನವದೆಹಲಿ: ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಡ್ರಾಪ್ ನೀಡುವುದಾಗಿ ನಂಬಿಸಿ 16 ವರ್ಷದ ಬಾಲಕಿಯನ್ನು ಬಸ್‌ಗೆ ಹತ್ತಿಸಿಕೊಂಡ ಕಾಮುಕರು, ಬಳಿಕ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ಕಾಶ್ಮೀರಿ ಗೇಟ್‌ ಪ್ರದೇಶದ ಬಳಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕ ಹಾಗೂ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಗಸ್ಟ್‌ 4ರಂದು ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ಬಸ್‌ನಲ್ಲಿ ತೆರಳುತ್ತಿದ್ದ ಬಾಲಕಿ, ಮಾರ್ಗ ಮಧ್ಯೆ ತಪ್ಪಾಗಿ ಬೇರೆ ನಿಲ್ದಾಣದಲ್ಲಿ ಇಳಿದಿದ್ದಳು ಎನ್ನಲಾಗಿದೆ. ರಾತ್ರಿ ವೇಳೆ ಅಪರಿಚಿತ ಪ್ರದೇಶದಲ್ಲಿ ಸಿಲುಕಿದ್ದ ಆಕೆ, ಆ ಮಾರ್ಗವಾಗಿ ತೆರಳುತ್ತಿದ್ದ ಖಾಲಿ ಸ್ಲೀಪರ್‌ ಬಸ್‌ಗೆ ಕೈ ತೋರಿಸಿ ನಿಲ್ಲಿಸಿದ್ದಳು.

ಬಾಲಕಿ ಸಂಕಷ್ಟದಲ್ಲಿರುವುದನ್ನು ಗಮನಿಸಿದ ಚಾಲಕ ಬಸ್ ನಿಲ್ಲಿಸಿ, ಸಹಾಯ ಮಾಡುವುದಾಗಿ ನಂಬಿಸಿ ಆಕೆಯನ್ನು ತಮ್ಮ ಬಸ್‌ಗೆ ಹತ್ತಿಸಿಕೊಂಡಿದ್ದಾರೆ.

File photo
ಅತ್ಯಾಚಾರ ಆರೋಪಿ ಜತೆ ನಂಟು: ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್‌ ರಾಜೀನಾಮೆ

ಬಳಿಕ ಇಬ್ಬರೂ ಸೇರಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿಗಳು ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಬಳಿಕ ಆರೋಪಿಗಳು ಬಾಲಕಿಯನ್ನು ದೆಹಲಿಯ ಕಾಶ್ಮೀರಿ ಗೇಟ್‌ ಪ್ರದೇಶದ ಬಳಿ ಇಳಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ನಂತರ ಬಾಲಕಿ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾಳೆ.

ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ‌ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಸ್ಲೀಪರ್‌ ಬಸ್‌ ಅನ್ನು ವಶಕ್ಕೆ ಪಡೆದು, ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com