

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದು, ಹಣಕಾಸು ಶಿಸ್ತು (Fiscal Discipline) ಮತ್ತು ನಿರಂತರ ಆರ್ಥಿಕ ಬೆಳವಣಿಗೆ (Sustained Growth) ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದ್ದಾರೆ.
ಭಾರತದ ಆರ್ಥಿಕತೆ ಸ್ಥಿರವಾಗಿರುವುದರ ಜೊತೆಗೆ ವೇಗವಾಗಿ ಬೆಳೆಯುವಂತೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು. ಅಭಿವೃದ್ಧಿ ಯೋಜನೆಗಳಿಗೆ ಬೆಂಬಲ ನೀಡುವ ಜೊತೆಗೆ, ಹಣಕಾಸು ಕೊರತೆಯನ್ನು ನಿಯಂತ್ರಣದಲ್ಲಿ ಇಡುವುದಕ್ಕೂ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಹೇಳಿದ್ದಾರೆ.
ನಾನು ಈ ಬಜೆಟ್ ಅನ್ನು ಮಾಘ ಪೂರ್ಣಿಮೆ ಮತ್ತು ಗುರು ರವಿದಾಸ್ ಅವರ ಜನ್ಮ ದಿನದ ಸಂದರ್ಭದಲ್ಲಿ ಮಂಡಿಸುತ್ತಿದ್ದೇನೆ. ಕಳೆದ 12 ವರ್ಷಗಳಲ್ಲಿ, ಅನಿಶ್ಚಿತತೆಗಳ ಹೊರತಾಗಿಯೂ, ನಾವು ಸ್ಥಿರವಾದ ಆರ್ಥಿಕತೆಯನ್ನು ಕಾಯ್ದುಕೊಂಡಿದ್ದೇವೆ. ನಾವು ದೂರಗಾಮಿ ರಚನಾತ್ಮಕ ಸುಧಾರಣೆಗಳನ್ನು ಕೈಗೊಂಡಿದ್ದೇವೆ. ನಾವು ಸ್ವಾವಲಂಬನೆಯನ್ನು ಪ್ರಮುಖ ಉದ್ದೇಶವಾಗಿ ಕಾಯ್ದುಕೊಂಡಿದ್ದೇವೆ. ನಾವು ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿದ್ದೇವೆ.
ನಾವು ವ್ಯಾಪಾರ ಮತ್ತು ಬಹುಪಕ್ಷೀಯತೆಗೆ ಬೆದರಿಕೆ ಇರುವ ಬಾಹ್ಯ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಹೊಸ ತಂತ್ರಜ್ಞಾನವು ಉತ್ಪಾದನಾ ವ್ಯವಸ್ಥೆಗಳನ್ನು ಪರಿವರ್ತಿಸುತ್ತಿದೆ. ಅಭಿವೃದ್ಧಿ ಹೊಂದಿದ ಭಾರತದತ್ತ ಭಾರತವು ಆತ್ಮವಿಶ್ವಾಸದ ಹೆಜ್ಜೆಗಳನ್ನು ಇಡುವುದನ್ನು ಮುಂದುವರಿಸುತ್ತದೆ. ಭಾರತ ಜಾಗತಿಕ ಮಾರುಕಟ್ಟೆಗಳಲ್ಲಿ ಸಂಯೋಜನೆಗೊಳ್ಳಬೇಕು ಮತ್ತು ಹೆಚ್ಚು ಹೆಚ್ಚು ರಫ್ತು ಮಾಡಬೇಕು. ವಿಶ್ವದ ಅತಿದೊಡ್ಡ ಆರ್ಥಿಕತೆಯಾಗುವ ನಮ್ಮ ಪ್ರಯಾಣದಲ್ಲಿ ನಮ್ಮೊಂದಿಗೆ ನಿಂತಿದ್ದಕ್ಕಾಗಿ ಜನರಿಗೆ ನಾನು ಧನ್ಯವಾದ ಹೇಳುತ್ತೇನೆಂದು ತಿಳಿಸಿದರು.
ಸರ್ಕಾರವು ಅಭಿವೃದ್ಧಿ ಹೊಂದಿದ ಭಾರತದತ್ತ ಹೆಜ್ಜೆ ಇಡಲು ಬಲವಾದ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುತ್ತದೆ. ಭಾರತವು ಜಾಗತಿಕ ಮಾರುಕಟ್ಟೆಯೊಂದಿಗೆ ಆಳವಾಗಿ ಸಂಯೋಜಿಸಲ್ಪಡುತ್ತದೆ. ವಿಶ್ವದ ಅತಿದೊಡ್ಡ ಆರ್ಥಿಕತೆಗಳಲ್ಲಿ ಒಂದನ್ನಾಗಿ ಮಾಡಿದ ಈ ದೇಶದ ನಾಗರಿಕರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮೂಲಕ ನಾನು ಭಾಗ A ಅನ್ನು ಪ್ರಾರಂಭಿಸಲು ಬಯಸುತ್ತೇನೆ. ರೈತರು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು, ಯುವಕರು, ಮಹಿಳೆಯರು ಮತ್ತು ಬಡವರು ಪ್ರಯೋಜನ ಪಡೆಯುವುದನ್ನು ನಾವು ಖಚಿತಪಡಿಸಿಕೊಂಡಿದ್ದೇವೆ ಎಂದರು.
ಇದೇ ವೇಳೆ ಆರ್ಥಿಕ ಪ್ರಗತಿ. ಜನರ ನಿರೀಕ್ಷೆ ಈಡೇರಿಸುವುದು, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಮೂರು ಕರ್ತವ್ಯಗಳ ನಿರ್ಮಲಾ ಸೀತಾರಾಮನ್ ಅವರು ಉಲ್ಲೇಖಿಸಿದ್ದಾರೆ.
ಮೊದಲನೆಯದು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಮೂಲಕ ಮತ್ತು ಅಸ್ಥಿರ ಜಾಗತಿಕ ಚಲನಶೀಲತೆ ನಡೆಯುವೆಯೂ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದು, ಎರಡನೆಯದು ಜನರ ಆಕಾಂಕ್ಷೆಗಳನ್ನು ಪೂರೈಸುವುದು ಮತ್ತು ಅವರ ಸಾಮರ್ಥ್ಯವನ್ನು ನಿರ್ಮಿಸಿ ಭಾರತದ ಸಮೃದ್ಧಿಯ ಹಾದಿಯಲ್ಲಿ ಅವರನ್ನು ಬಲವಾದ ಪಾಲುದಾರರನ್ನಾಗಿ ಮಾಡುವುದು.ಮೂರನೆಯದು ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂದು ಖಚಿತಪಡಿಸಿಕೊಳ್ಳುವುದು.
ಪ್ರತಿಯೊಂದು ಕುಟುಂಬ, ಸಮುದಾಯ, ಪ್ರದೇಶವು ಅರ್ಥಪೂರ್ಣ ಭಾಗವಹಿಸುವಿಕೆಗಾಗಿ ಸಂಪನ್ಮೂಲಗಳು, ಸೌಲಭ್ಯಗಳ ಪ್ರವೇಶವನ್ನು ಹೊಂದಿದೆ ಎಂದು ಖಚಿತಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.
Advertisement