

ನವದೆಹಲಿ: ಕೇಂದ್ರ ಹಣಕಾಸುವ ಸಚಿವ ನಿರ್ಮಲಾ ಸೀತಾರಾಮನ್ ಅವರು ಭಾನುವಾರ 2026-27ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಸರ್ಕಾರದ ಮೂರು ಕರ್ತವ್ಯಗಳನ್ನು ಪಟ್ಟಿ ಮಾಡಿದ್ದಾರೆ.
ಇಂದು ಲೋಕಸಭೆಯಲ್ಲಿ 9ನೇ ಬಾರಿ ಬಜೆಟ್ ಮಂಡಿಸದ ನಿರ್ಮಲಾ ಅವರು, "ಕರ್ತವ್ಯ ಭವನದಲ್ಲಿ ಸಿದ್ಧಪಡಿಸಲಾದ ಮೊದಲ ಬಜೆಟ್ ಇದಾಗಿರುವುದರಿಂದ, ನಾವು ಮೂರು ಕರ್ತವ್ಯಗಳಿಂದ ಪ್ರೇರಿತರಾಗಿದ್ದೇವೆ" ಎಂದು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.
"ಮೊದಲ ಕರ್ತವ್ಯವೆಂದರೆ ಉತ್ಪಾದಕತೆ ಮತ್ತು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಮೂಲಕ ಮತ್ತು ಅಸ್ಥಿರ ಜಾಗತಿಕ ಚಲನಶೀಲತೆಗೆ ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವ ಮೂಲಕ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದು ಮತ್ತು ಉಳಿಸಿಕೊಳ್ಳುವುದು.
"ಎರಡನೆ ಕರ್ತವ್ಯವೆಂದರೆ ಜನರ ಆಕಾಂಕ್ಷೆಗಳನ್ನು ಈಡೇರಿಸುವುದು ಮತ್ತು ಅವರ ಸಾಮರ್ಥ್ಯವನ್ನು ಹೆಚ್ಚಿಸುವುದು ಮತ್ತು ಭಾರತದ ಸಮೃದ್ಧಿಯ ಹಾದಿಯಲ್ಲಿ ಅವರನ್ನು ಬಲವಾದ ಪಾಲುದಾರರನ್ನಾಗಿ ಮಾಡುವುದು.
ಮೂರನೇ ಕರ್ತವ್ಯವೆಂದರೆ ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂದು ಖಚಿತಪಡಿಸಿಕೊಳ್ಳುವುದು . ಪ್ರತಿಯೊಂದು ಕುಟುಂಬ, ಸಮುದಾಯ, ಪ್ರದೇಶವು ಸಂಪನ್ಮೂಲಗಳು, ಸೌಲಭ್ಯಗಳು ಮತ್ತು ಅರ್ಥಪೂರ್ಣ ಭಾಗವಹಿಸುವಿಕೆಗೆ ಅವಕಾಶಗಳನ್ನು ಹೊಂದಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದರು.
Advertisement