Earthquake
ಭೂಕಂಪನ (ಸಾಂದರ್ಭಿಕ ಚಿತ್ರ)online desk

ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು

ದ್ವೀಪ ಪ್ರದೇಶದಲ್ಲಿ ಭೂಕಂಪ ಸಂಭವಿಸಿದ ಕೆಲ ಹೊತ್ತಿನಲ್ಲೇ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲೂ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ.
Published on

ನವದದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಹಾಗೂ ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಸೋಮವಾರ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.6 ಮತ್ತು 4.7 ತೀವ್ರತೆ ದಾಖಲಾಗಿದೆ.

ಇಂದು ಮುಂಜಾನೆ 3.30 ರ ಸುಮಾರಿಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 4.6 ತೀವ್ರತೆಯಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಇದರ ಕೇಂದ್ರಬಿಂದು 9.03° ಉತ್ತರ ಅಕ್ಷಾಂಶ ಮತ್ತು 92.78° ಪೂರ್ವ ರೇಖಾಂಶದಲ್ಲಿದೆ ಎಂದು ತಿಳಿಸಿದೆ.

ದ್ವೀಪ ಪ್ರದೇಶದಲ್ಲಿ ಭೂಕಂಪ ಸಂಭವಿಸಿದ ಕೆಲ ಹೊತ್ತಿನಲ್ಲೇ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲೂ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ.

ಈ ಕುರಿತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ನೀಡಿದ ಮಾಹಿತಿ ಪ್ರಕಾರ, ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಮುಂಜಾನೆ 4.7 ತೀವ್ರತೆಯಲ್ಲಿ 10 ಕಿಮೀ ಆಳದಲ್ಲಿ ಭೂಕಂಪನವಾಗಿದೆ. ಇದರ ಕೆಂದ್ರಬಿಂದುವನ್ನು ಗುಲ್ಮಾರ್ಗ್‌ಗೆ ಹತ್ತಿರ ಮತ್ತು ಶ್ರೀನಗರದ ಪಶ್ಚಿಮದಲ್ಲಿ ಗುರುತಿಸಲಾಗಿದೆ.

ಭೂಕಂಪದಿಂದಾಗಿ ಇಲ್ಲಿಯವರೆಗೆ ಯಾವುದೇ ಹಾನಿ ಸಂಭವಿಸಿದ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ

 Earthquake
ಅಸ್ಸಾಂನಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲು; ಚೀನಾ-ಭೂತಾನ್, ಬಾಂಗ್ಲಾದಲ್ಲೂ ಕಂಪಿಸಿದ ಭೂಮಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com