

ನವದೆಹಲಿ: ಲೋಕಸಭೆ ಕಲಾಪದ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಳೆದ ಕೆಲವು ಗಂಟೆಗಳಿಂದ ತಮ್ಮ ನಿಲುವನ್ನು ಹೇಳಲು ಪ್ರಯತ್ನಿಸುತ್ತಿದ್ದೇನೆ. ಅದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದೆ ಎಂದು ಹೇಳುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ರಾಹುಲ್ ಗಾಂಧಿ ಈ ಹೇಳಿಕೆ ನೀಡುತ್ತಿದ್ದಂತೆ ಕಾಂಗ್ರೆಸ್ ಸಂಸದರು ನಗಲು ಪ್ರಾರಂಭಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್, ನೀವು ನಿಮ್ಮ ನಾಯಕನನ್ನು ನೋಡಿ ಏಕೆ ನಗುತ್ತಿದ್ದೀರಿ? ಅವರನ್ನು ಮಾತನಾಡಲು ಬಿಡಿ ಎಂದು ಹೇಳಿದರು.
ಲೋಕಸಭಾ ಸ್ಪೀಕರ್ ಕುರ್ಚಿಯಲ್ಲಿ ಕುಳಿತಿದ್ದ ಹಿರಿಯ ನಾಯಕ ಜಗದಾಂಬಿಕಾ ಪಾಲ್, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಮಾತನಾಡಲು ಕೇಳಿದೆ. ಅವರು ರಾಷ್ಟ್ರೀಯ ಭದ್ರತೆಯ ವಿಷಯವನ್ನು ಮಾತನಾಡುವುದಾಗಿ ಹೇಳಿದರು. ಅದಕ್ಕೆ ನಾನು ಏನೂ ಹೇಳಲಿಲ್ಲ. ಆದರೆ ನೀವು ನಿಮ್ಮ ನಾಯಕನನ್ನು ನೋಡಿ ಏಕೆ ನಗುತ್ತಿದ್ದೀರಿ? ಎಂದು ಪ್ರಶ್ನಿಸಿದರು.
ನೀವು ಮಾತನಾಡಲು ಬಯಸುವ ವಿಷಯದ ಬಗ್ಗೆ ಸ್ಪೀಕರ್ ತೀರ್ಪು ನೀಡಿದ್ದಾರೆ. ಆದ್ದರಿಂದ, ನೀವು ಆ ವಿಷಯದ ಬಗ್ಗೆ ಮಾತನಾಡಬಾರದು. ನೀವು ಆ ವಿಷಯದ ಬಗ್ಗೆ ಮಾತನಾಡಿದರೆ, ವಿರೋಧ ಪಕ್ಷದ ನಾಯಕರಾಗಿದ್ದರೂ, ನೀವು ಸದನದ ನಿಯಮಗಳನ್ನು ಪಾಲಿಸುವುದಿಲ್ಲ ಎಂದರ್ಥವೇ? ಲೋಕಸಭೆಯ ಸ್ಪೀಕರ್ ಬಗ್ಗೆ ನಿಮಗೆ ಗೌರವವಿಲ್ಲವೇ? ಎಂದರು. ಇದಕ್ಕೆ ಪ್ರತಿಕ್ರಿಯೆಯಾಗಿ ರಾಹುಲ್ ಗಾಂಧಿ ರಾಷ್ಟ್ರೀಯ ಭದ್ರತೆ ತಮಗೆ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
ಭಾರತ ಚೀನಾ ನಡುವಿನ 2020ರ ಲಡಾಖ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರಾವಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತ ಲೇಖನದ ಭಾಗದ ವಿಚಾರವನ್ನು ಪ್ರಸ್ತಾಪಿಸಿದ್ದು ಈ ವೇಳೆ ಸ್ಪೀಕರ್ ಓಂ ಬಿರ್ಲಾ ರಾಹುಲ್ ಗಾಂಧಿಯನ್ನು ತಡೆದ ಪರಿಣಾಮ ಕೋಲಾಹಲಕ್ಕೆ ಕಾರಣವಾಗಿತ್ತು.
ನರಾವಣೆ ಆತ್ಮಚರಿತ್ರೆಯಲ್ಲಿ ಏನಿದೆ?
2020ರಲ್ಲಿ ನಡೆದ ಗಲ್ವಾನ್ ಕಣಿವೆ ಸಂಘರ್ಷದ ಕುರಿತು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರಾವಣೆ ಅವರ ಅಪ್ರಕಟಿತ ಆತ್ಮಚರಿತ್ರೆಯಲ್ಲಿ, ಚೀನಿ ಪಡೆಗಳ ದಿಢೀರ್ ಆಕ್ರಮಣದಿಂದ ಆಪತ್ತು ಎದುರಾಗಿದ್ದ ಸಂದರ್ಭದಲ್ಲಿ ನಮ್ಮ ಭೂ ಪ್ರದೇಶ ರಕ್ಷಿಸಿಕೊಳ್ಳಲು ಕಮಾಂಡೋ ಪಡೆಗಳಿಗೆ ಕಾರ್ಯಾಚರಣೆ ನಡೆಸಲು ಅನುಮತಿ ದೊರಕಿರಲಿಲ್ಲ. ಗಲ್ವಾನ್ ಕಣಿವೆ ಪರಿಸ್ಥಿತಿ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೂ ಮಾಹಿತಿ ನೀಡಿದ್ದೆ. ಸೇನಾ ಪ್ರಧಾನ ಕಚೇರಿಯಲ್ಲಿ ಕಾರ್ಯಾಚರಣೆ ಬಗ್ಗೆ ಯಾವ ನಿರ್ದೇಶನ ಬರಬಹುದು ಎಂಬ ಬಗ್ಗೆ ನಿರೀಕ್ಷೆಯಿಂದ ಕಾಯುತ್ತಿದ್ದೆ. ಮುಂಜಾಗ್ರತಾ ಕ್ರಮವಾಗಿ ಉತ್ತರ ಕಮಾಂಡೋ ಪಡೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿತ್ತು. ಆದರೆ ನಿಮಗೆ ಯಾವುದು ಸೂಕ್ತವೋ ಅದನ್ನು ಮಾಡಿ ಎಂಬ ನಿರ್ದೇಶನ ಬಂತೆ ಹೊರತು, ಸೇನಾ ಕಾರ್ಯಾಚರಣೆ ಬಗ್ಗೆ ಯಾವ ನಿರ್ದೇಶನವೂ ಸಿಗಲಿಲ್ಲ ಎಂದು ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿರುವುದಾಗಿ ವರದಿ ತಿಳಿಸಿದೆ.
Advertisement