ಲೋಕಸಭೆಯಲ್ಲಿ ತೀವ್ರ ಕೋಲಾಹಲ: 8 ಕಾಂಗ್ರೆಸ್ ಸಂಸದರ ಅಮಾನತು; ಕಲಾಪ ನಾಳೆಗೆ ಮುಂದೂಡಿಕೆ

ಕಾಂಗ್ರೆಸ್ ಸಂಸದರ ಅಮಾನತು ಖಂಡಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದರು.
Eight Congress MPs suspended from Lok Sabha amid opposition uproar; House adjourned for day
ರಾಹುಲ್ ಗಾಂಧಿ
Updated on

ರಾಷ್ಟ್ರೀಯ ಭದ್ರತೆ ಕುರಿತು ಮಾತನಾಡುತ್ತೇನೆಂದು Rahul Gandhi ಹೇಳುತ್ತಿದ್ದಂತೆ ನಕ್ಕ Congress ಸಂಸದ, Video!ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ 'ಪುಸ್ತಕ'ದಲ್ಲಿನ ಅಂಶಗಳನ್ನು ಉಲ್ಲೇಖಿಸಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಅವಕಾಶ ನಿರಾಕರಿಸಿದ್ದಕ್ಕಾಗಿ ಲೋಕಸಭೆಯಲ್ಲಿ ಮಂಗಳವಾರ ತೀವ್ರ ಕೋಲಾಹಲಕ್ಕೆ ಕಾರಣವಾಗಿದ್ದು, ಎಂಟು ಕಾಂಗ್ರೆಸ್ ಸಂಸದರನ್ನು ಲೋಕಸಭೆ ಸ್ಪೀಕರ್ ಅಮಾನತುಗೊಳಿಸಿದ್ದಾರೆ.

ಸಂಸದರಾದ ಹಿಬಿ ಈಡನ್, ಸಿ. ಕಿರಣ್ ಕುಮಾರ್ ರೆಡ್ಡಿ, ಗುರ್ಜೀತ್ ಸಿಂಗ್ ಔಜ್ಲಾ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಮಾಣಿಕ್ಕಮ್ ಟ್ಯಾಗೋರ್, ಪ್ರಶಾಂತ್ ಪಡೋಲ್ ಮತ್ತು ಡೀನ್ ಕುರಿಯಾಕೋಸ್ ಅವರನ್ನು ಸ್ಪೀಕರ್ ಪೀಠದ ಕಡೆಗೆ ಕಾಗದಗಳನ್ನು ಎಸೆದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ.

ತೀವ್ರ ಗದ್ದಲದ ನಡುವೆ ಲೋಕಸಭೆಯ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಬಳಿಕ ಕಾಂಗ್ರೆಸ್ ಸಂಸದರ ಅಮಾನತು ಖಂಡಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದರು.

Eight Congress MPs suspended from Lok Sabha amid opposition uproar; House adjourned for day
ರಾಷ್ಟ್ರೀಯ ಭದ್ರತೆ ಕುರಿತು ಮಾತನಾಡುತ್ತೇನೆಂದು Rahul Gandhi ಹೇಳುತ್ತಿದ್ದಂತೆ ನಕ್ಕ Congress ಸಂಸದ, Video!

ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ 'ಪುಸ್ತಕ'ದ ಕುರಿತು ಮಾತನಾಡಲು ಸ್ಪೀಕರ್ ಅವಕಾಶ ನಿರಾಕರಿಸಿದ್ದನ್ನು ಖಂಡಿಸಿ ವಿರೋಧ ಪಕ್ಷದ ಸಂಸದರು ಪ್ರತಿಭಟಿಸುತ್ತಿದ್ದಾರೆ.

ಇಂದು ಬೆಳಗ್ಗೆ ನರವಾಣೆ ಅವರ ಅಪ್ರಕಟಿತ 'ಪುಸ್ತಕ'ದಲ್ಲಿನ ಅಂಶಗಳನ್ನು ಉಲ್ಲೇಖಿಸಿ ನಿಯತಕಾಲಿವೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹಲ್ ಗಾಂಧಿ ಲೋಕಸಭೆಯಲ್ಲಿ ಪ್ರದರ್ಶಿಸಿದರು ಮತ್ತು "ಇದು ನಮ್ಮ ರಾಷ್ಟ್ರಪತಿಗಳ ಭಾಷಣದ ಕೇಂದ್ರಬಿಂದುವಾಗಿದೆ. ನಾನು ಹೇಳುತ್ತಿರುವುದು ಚೀನಾ ಮತ್ತು ಭಾರತದ ನಡುವೆ ಏನಾಯಿತು ಮತ್ತು ನಮ್ಮ ಪ್ರಧಾನಿ ಅದಕ್ಕೆ ಹೇಗೆ ಪ್ರತಿಕ್ರಿಯಿಸಿದರು ಎಂಬುದರ ಕುರಿತು ಹೇಳಿಕೆ ನೀಡಲು ಅವಕಾಶ ನೀಡಬೇಕು. ನನ್ನನ್ನು ಏಕೆ ತಡೆಯಲಾಗುತ್ತಿದೆ?" ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com