ಮಣಿಪುರದಲ್ಲಿ ಮಹತ್ವದ ಬೆಳವಣಿಗೆ: ಮತ್ತೆ ಬಿಜೆಪಿ ಸರ್ಕಾರ ರಚನೆ; ನೂತನ ಸಿಎಂ ಆಗಿ ಖೇಮ್‌ಚಂದ್ ಸಿಂಗ್ ಆಯ್ಕೆ

ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ವೈ ಖೇಮ್‌ಚಂದ್ ಸಿಂಗ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ.
Y Khemchand Singh set to become next Manipur CM after being elected leader of BJP legislature party
ವೈ ಖೇಮ್‌ಚಂದ್ ಸಿಂಗ್
Updated on

ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮಹತ್ವದ ಬೆಳವಣಿಗೆಯಲ್ಲಿ ಒಂದು ವರ್ಷದ ರಾಷ್ಟ್ರಪತಿ ಆಡಳಿತ ಅಂತ್ಯವಾಗಿದ್ದು, ಮತ್ತೆ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದೆ.

ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ವೈ ಖೇಮ್‌ಚಂದ್ ಸಿಂಗ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಮಾಜಿ ಸಿಎಂ ಬಿರೇನ್ ಸಿಂಗ್, ಬಿಜೆಪಿ ಶಾಸಕರು, ಪಕ್ಷದ ಕೇಂದ್ರ ವೀಕ್ಷಕ ತರುಣ್ ಚುಗ್ ಮತ್ತು ಬಿಜೆಪಿ ಈಶಾನ್ಯ ಉಸ್ತುವಾರಿ ಸಂಬಿತ್ ಪಾತ್ರ ಸೇರಿದಂತೆ ಇತರರು ಭಾಗವಹಿಸಿದ್ದರು.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಯುಮ್ನಾಮ್ ಖೇಮ್‌ಚಂದ್ ಸಿಂಗ್ ಅವರು ಮಣಿಪುರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸುಮಾರು ಒಂದು ವರ್ಷದಿಂದ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತ ಹಿಂಪಡೆಯುವ ಪ್ರಕ್ರಿಯೆ ಆರಂಭವಾಗಿದೆ.

Y Khemchand Singh set to become next Manipur CM after being elected leader of BJP legislature party
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ಮುಂದು: ರಾಜ್ಯಸಭೆಯಲ್ಲಿಂದು ನಿರ್ಣಯ ಮಂಡನೆ

ಇಂದು ರಾತ್ರಿ ಎನ್‌ಡಿಎ ಮಿತ್ರಪಕ್ಷಗಳ ಶಾಸಕರ ಸಭೆ ನಡೆಯಲಿದ್ದು, ಅಲ್ಲಿ ಸಿಂಗ್ ಅವರನ್ನು ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅನುಮೋದಿಸುವ ನಿರೀಕ್ಷೆಯಿದೆ ಎಂದು ಪಿಟಿಐ ವರದಿ ಮಾಡಿದೆ.

ಸಿಂಗ್‌ಜಮೇ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿಂಗ್ ಅವರು ಈ ಹಿಂದೆ, ಬಿರೇನ್ ಸಿಂಗ್ ಸರ್ಕಾರದ ಎರಡನೇ ಅವಧಿಯಲ್ಲಿ, ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಕಳೆದ ಮೇ 2023ರಿಂದ ಮಣಿಪುರದಲ್ಲಿ ಆರಂಭವಾದ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷವು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸಿತ್ತು. ಈ ಹಿನ್ನೆಲೆಯಲ್ಲಿ ಉಂಟಾದ ರಾಜಕೀಯ ಅಸ್ಥಿರತೆಯಿಂದಾಗಿ, ಅಂದಿನ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಪತನಗೊಂಡ ನಂತರ, ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com