ಬಿಹಾರ ಚುನಾವಣೆ ಪ್ರಶ್ನಿಸಿ ಸುಪ್ರೀಂಗೆ ಪ್ರಶಾಂತ್ ಕಿಶೋರ್ ಅರ್ಜಿ; ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ!

ಪ್ರಶಾಂತ್ ಕಿಶೋರ್ ಪಕ್ಷದ ಅರ್ಜಿ ಶುಕ್ರವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠದ ಮುಂದೆ ವಿಚಾರಣೆಗೆ ಬರುವ ಸಾಧ್ಯತೆಯಿದೆ.
Prashanth Kishore
ಪ್ರಶಾಂತ್ ಕಿಶೋರ್
Updated on

ನವದೆಹಲಿ: ಮಾಜಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ರಾಜ್ಯದಲ್ಲಿ ಮತ್ತೆ ಹೊಸದಾಗಿ ಚುನಾವಣೆ ನಡೆಸಬೇಕೆಂದು ಕೋರಿದೆ.

ಪ್ರಶಾಂತ್ ಕಿಶೋರ್ ಪಕ್ಷದ ಅರ್ಜಿ ಶುಕ್ರವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠದ ಮುಂದೆ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಬಿಹಾರದ ಒಟ್ಟು 243 ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 202 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ನ ಆರು ಸ್ಥಾನಗಳು ಸೇರಿದಂತೆ ಇಂಡಿಯಾ ಬ್ಲಾಕ್ ಕೇವಲ 35 ಸ್ಥಾನಗಳನ್ನು ಗಳಿಸಿದೆ.

Prashanth Kishore
ಬಿಹಾರ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಆದರೆ ಸದ್ಯ ನನ್ನ ಬಳಿ ಯಾವುದೇ ಪುರಾವೆ ಇಲ್ಲ: ಪ್ರಶಾಂತ್ ಕಿಶೋರ್

ಜನ್ ಸುರಾಜ್ ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ ತನ್ನ ಖಾತೆಯನ್ನು ತೆರೆಯಲು ವಿಫಲವಾಗಿದ್ದು, ಹೆಚ್ಚಿನ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.

ವಿಧಾನಸಭೆ ಚುನಾವಣಾ ಘೋಷಣೆಯಾದ ನಂತರ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಮಹಿಳಾ ರೋಜ್‌ಗಾರ್ ಯೋಜನೆಯಡಿ ಮಹಿಳೆಯರಿಗೆ ತಲಾ 10,000 ರೂ.ಗಳನ್ನು ವರ್ಗಾಯಿಸುವ ಮೂಲಕ ಬಿಹಾರ ಸರ್ಕಾರವು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಜನ್ ಸುರಾಜ್ ಪಕ್ಷ ತನ್ನ ಅರ್ಜಿಯಲ್ಲಿ ಆರೋಪಿಸಿದೆ.

ರಾಜ್ಯದಲ್ಲಿ ಮಹಿಳಾ ಮತದಾರರಿಗೆ ನೇರ ಹಣ ವರ್ಗಾವಣೆಯ ವಿರುದ್ಧ ಸಂವಿಧಾನದ 324ನೇ ವಿಧಿ ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 123ರ ಅಡಿಯಲ್ಲಿ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಸಹ ಅರ್ಜಿಯಲ್ಲಿ ಕೋರಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com