ಮೇಘಾಲಯ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: ಮತ್ತೆ ಎರಡು ಶವ ಪತ್ತೆ, ಸಾವಿನ ಸಂಖ್ಯೆ 27ಕ್ಕೆ ಏರಿಕೆ

ಹಲವಾರು ಜನ ಇನ್ನೂ ಕಾಣೆಯಾಗಿದ್ದಾರೆ ಮತ್ತು ಶೋಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Meghalaya: Two more bodies found, toll in coal mine blast reaches 27
ರಕ್ಷಣಾ ಕಾರ್ಯಾಚರಣೆ
Updated on

ಶಿಲ್ಲಾಂಗ್: ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯ "ಅಕ್ರಮ" ಕಲ್ಲಿದ್ದಲು ಗಣಿಯಲ್ಲಿ ಕಳೆದ ಗುರುವಾರ ಭಾರೀ ಸ್ಫೋಟ ಸಂಭವಿಸಿದ್ದು, ಶನಿವಾರ ಮತ್ತೆ ಎರಡು ಶವಗಳು ಪತ್ತೆಯಾಗಿವೆ. ಇದರೊಂದಿಗೆ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಥಾಂಗ್ಸ್ಕು ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆ ಮುಂದುವರಿದಿದ್ದರಿಂದ ಇಂದು ಮತ್ತೆ ಎರಡು ಶವಗಳು ಪತ್ತೆಯಾಗಿವೆ ಎಂದು ಅವರು ಹೇಳಿದ್ದಾರೆ.

ಹಲವಾರು ಜನ ಇನ್ನೂ ಕಾಣೆಯಾಗಿದ್ದಾರೆ ಮತ್ತು ಶೋಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Meghalaya: Two more bodies found, toll in coal mine blast reaches 27
ಮೇಘಾಲಯ: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ; ಕನಿಷ್ಠ 16 ಕಾರ್ಮಿಕರು ಸಾವು

ಮೃತರ ಗುರುತುಗಳನ್ನು ಪರಿಶೀಲಿಸುವ ಕೆಲಸವೂ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕಾಶ್ ಕುಮಾರ್ ತಿಳಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ, ಗಣಿ ಮತ್ತು ಖನಿಜ(ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ ಹಾಗೂ ಸ್ಫೋಟಕ ವಸ್ತುಗಳ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಖ್ಲೈಹ್ರಿಯತ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಲಿದ್ದಲು ಗಣಿಗಾರಿಕೆ ಚಟುವಟಿಕೆ ನಡೆಯುತ್ತಿದ್ದ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಗಣಿ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com