

ಪುಣೆ: ಮಾಜಿ ಕೇಂದ್ರ ಸಚಿವ ಹಾಗೂ ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರಿಗೆ ಸೋಮವಾರ ಗಂಟಲು ನೋವು ಮತ್ತು ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಬಾರಾಮತಿಯಲ್ಲಿರುವ ಅವರ ನಿವಾಸದಿಂದ ಪುಣೆ ಆಸ್ಪತ್ರೆಗೆ ದಾಖಲಿಸಲಾಗಿದೆ.
85 ವರ್ಷದ ಹಿರಿಯ ನಾಯಕ ಶರದ್ ಪವಾರ್ ಅವರು ಗಂಟಲು ಸೋಂಕಿನಿಂದ ಬಳಲುತ್ತಿರುವ ಕಾರಣ ಅವರನ್ನು ರೂಬಿ ಹಾಲ್ ಚಿಕಿತ್ಸಾಲಯಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಆಪ್ತ ಸಹಾಯಕರೊಬ್ಬರು ತಿಳಿಸಿದ್ದಾರೆ.
ರೂಬಿ ಹಾಲ್ ಕ್ಲಿನಿಕ್‌ನ ಮುಖ್ಯ ಹೃದ್ರೋಗ ತಜ್ಞ ಮತ್ತು ವ್ಯವಸ್ಥಾಪಕ ಟ್ರಸ್ಟಿ ಡಾ. ಪರ್ವೇಜ್ ಗ್ರಾಂಟ್ ಅವರು ಶರದ್ ಪವಾರ್ ಆಸ್ಪತ್ರೆಗೆ ದಾಖಲಾಗಿರುವುದನ್ನು ಖಚಿತಪಡಿಸಿದ್ದಾರೆ.
"ವೈದ್ಯರ ತಂಡ ಶರದ್ ಪವಾರ್ ಅವರನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದು, ಅದಕ್ಕೆ ಅನುಗುಣವಾಗಿ ಮುಂದಿನ ಕ್ರಮವನ್ನು ನಿರ್ಧರಿಸಲಾಗುತ್ತದೆ" ಎಂದು ಡಾ. ಗ್ರಾಂಟ್ ಹೇಳಿದ್ದಾರೆ.
Advertisement