

ಮೊರೆನಾ: ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಸೋಮವಾರ ಮಾತಾ ದೇವಾಲಯದ ಮೇಲ್ಛಾವಣಿ ಕುಸಿದು ಮೂವರು ಹುಡುಗಿಯರು ಸಾವನ್ನಪ್ಪಿದ್ದು, ದಂಪತಿ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಹ್ರೌಲಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಗುಮ್ಮಟ ನಿರ್ಮಿಸಲು ಛಾವಣಿ ಕೆಡವುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಕೈಲಾರಸ್ ಪೊಲೀಸ್ ಠಾಣೆಯ ಉಸ್ತುವಾರಿ ಧೀರೇಶ್ ಕುಶ್ವಾಹ ಅವರು ಹೇಳಿದ್ದಾರೆ.
ಮೃತರನ್ನು ವೈಷ್ಣವಿ ಸಿಕರ್ವಾರ್(11), ಛಾಯಾ ಗೋಸ್ವಾಮಿ(7) ಮತ್ತು ಕರಿಷ್ಮಾ ಗೋಸ್ವಾಮಿ(9) ಎಂದು ಗುರುತಿಸಲಾಗಿದೆ.
ಪ್ರಸಾದ ವಿತರಿಸಲು ದೇವಸ್ಥಾನಕ್ಕೆ ಬಂದಿದ್ದ ಗ್ರಾಮಸ್ಥ ಸತೀಶ್ ಗೌಡ್ ಮತ್ತು ಅವರ ಪತ್ನಿ ಸೇರಿದಂತೆ ಆರು ಮಂದಿ ಅವಶೇಷಗಳಡಿ ಸಿಲುಕಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮಸ್ಥರು ತಕ್ಷಣ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಮತ್ತು ಅವಶೇಷಗಳನ್ನು ತೆಗೆದುಹಾಕಿದರು ಎಂದು ಕುಶ್ವಾಹ ತಿಳಿಸಿದ್ದಾರೆ.
ಜೌರಾ ಎಸ್‌ಡಿಎಂ ಶುಭಂ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಘಟನೆಯ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
Advertisement