ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ ಅಸ್ಸಾಂ ಸಿಎಂ

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೊಗೊಯ್, "ರಾಜ್ಯದಾದ್ಯಂತ ಸುಮಾರು 12,000 ಬಿಘಾ ಭೂಮಿಯನ್ನು ಸಿಎಂ ಮತ್ತು ಅವರ ಕುಟುಂಬ ಒತ್ತುವರಿ ಮಾಡಿದೆ" ಎಂದು ಆರೋಪಿಸಿದ್ದರು.
Assam CM files Rs 500 cr defamation case against Congress leaders
ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
Updated on

ಗುವಾಹಟಿ: ಕಾಂಗ್ರೆಸ್ ನಾಯಕರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿರುದ್ಧ ಮಾಡಿದ ಆರೋಪಗಳು "ದುರುದ್ದೇಶಪೂರಿತ" ಎಂದಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಅವರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಮಂಗಳವಾರ ತಿಳಿಸಿದ್ದಾರೆ.

ಫೆಬ್ರವರಿ 4 ರಂದು ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೊಗೊಯ್, "ರಾಜ್ಯದಾದ್ಯಂತ ಸುಮಾರು 12,000 ಬಿಘಾ ಭೂಮಿಯನ್ನು ಸಿಎಂ ಮತ್ತು ಅವರ ಕುಟುಂಬ ಒತ್ತುವರಿ ಮಾಡಿದೆ" ಎಂದು ಆರೋಪಿಸಿದ್ದರು.

"ಇಂದು ತಮ್ಮ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಸ್ಸಾಂ ಸಿಎಂ, ನನ್ನ ವಿರುದ್ಧ ಸುಳ್ಳು, ದುರುದ್ದೇಶಪೂರಿತ ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಹಾಗೂ ಗೌರವ್ ಗೊಗೊಯ್ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ" ಎಂದು ಶರ್ಮಾ X ನಲ್ಲಿ ಪೋಸ್ಟ್ ಮಾಡಿದ್ದಾರೆ.

Assam CM files Rs 500 cr defamation case against Congress leaders
ಮುಸ್ಲಿಮರ ನರಮೇಧಕ್ಕೆ ಅಸ್ಸಾಂ ಮುಖ್ಯಮಂತ್ರಿ ಪ್ರಚೋದನೆ: ಪೊಲೀಸ್ ಕ್ರಮಕ್ಕೆ ಗೌರವ್ ಗೊಗೊಯ್ ಒತ್ತಾಯ

ಸೋಮವಾರ ನಡೆದ ಮತ್ತೊಂದು ಪತ್ರಿಕಾಗೋಷ್ಠಿಯಲ್ಲಿ, ಗೊಗೊಯ್ ಅವರು, ತಮ್ಮ ವಿಡಿಯೋಗಳ ಮೂಲಕ ಮುಖ್ಯಮಂತ್ರಿ ಶರ್ಮಾ ಅವರು ಮುಸ್ಲಿಮರ ವಿರುದ್ಧ "ಜನಾಂಗೀಯ ಹತ್ಯೆಯನ್ನು ಪ್ರಚೋದಿಸುತ್ತಿದ್ದಾರೆ" ಎಂದು ಆರೋಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com