

ನವದೆಹಲಿ: ಭಾರತದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆಯವರ ಆತ್ಮಚರಿತ್ರೆ “Four Stars of Destiny” ಕುರಿತ ವಿವಾದ ಸಂಸತ್ತಿನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ನಡುವಲ್ಲೇ, ಪುಸ್ತಕದ ಪ್ರಕಾಶಕರಾದ ಪೆಂಗ್ವಿನ್ ರ್ಯಾಂಡಮ್ ಹೌಸ್ ಇಂಡಿಯಾ (PRHI) ಮಹತ್ವದ ಹೇಳಿಕೆಯನ್ನು ನೀಡಿದೆ.
ಪುಸ್ತಕವನ್ನು ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ ಹಾಗೂ ಯಾವುದೇ ಮುದ್ರಿತ ಅಥವಾ ಡಿಜಿಟಲ್ ಪ್ರತಿಗಳು ಸಾರ್ವಜನಿಕರಿಗೆ ಬಿಡುಗಡೆ ಮಾಡಿಲ್ಲ ಎಂದು ಪ್ರಕಾಶಕರು ಸ್ಪಷ್ಟಪಡಿಸಿದ್ದಾರೆ.
ಈ ಪುಸ್ತಕ ಇನ್ನೂ ಪ್ರಕಟಣೆಗೆ ಹೋಗಿಲ್ಲ. ಯಾವುದೇ ಮುದ್ರಿತ ಅಥವಾ ಡಿಜಿಟಲ್ ಪ್ರತಿಗಳನ್ನು ಸಾರ್ವಜನಿಕರಿಗೆ ನೀಡಿಲ್ಲ, ಪ್ರಸ್ತುತ ಪ್ರಸಾರವಾಗುತ್ತಿರುವ ಆತ್ಮಚರಿತ್ರೆಯ ಯಾವುದೇ ಆವೃತ್ತಿ, ಪೂರ್ಣವಾಗಿ ಅಥವಾ ಭಾಗಶಃ, ಹಕ್ಕುಸ್ವಾಮ್ಯ ಉಲ್ಲಂಘನೆಯಾಗುತ್ತದೆ. ಅದನ್ನು ತಕ್ಷಣವೇ ನಿಲ್ಲಿಸಬೇಕು. ಅನಧಿಕೃತ ಪ್ರಸಾರದ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಂಸ್ಥೆ ಎಚ್ಚರಿಸಿದೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸರು, ಪ್ರಕಾಶಕರ ಅನುಮೋದನೆ ಪಡೆಯದೆ ಸೋರಿಕೆ ಅಥವಾ ಉಲ್ಲಂಘನೆಯ ಆರೋಪದ ಬಗ್ಗೆ ಸಮಗ್ರ ತನಿಖೆ ನಡೆಸಲು ವಿಶೇಷ ಘಟಕದಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಪ್ರಕಟಗೊಳ್ಳದ ಈ ಪುಸ್ತಕವು ಸಂಸತ್ತಿನಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ. ಕಳೆದ ವಾರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಈ ಪುಸ್ತಕದ ಪ್ರತಿಯನ್ನು ಹಿಡಿದು ಸಂಸತ್ತಿನ ಆವರಣದಲ್ಲಿ ಪ್ರತಿಭಟಿಸಿದ್ದರು.
2020ರ ಲಡಾಖ್‌ನಲ್ಲಿ ನಡೆದ ಭಾರತ-ಚೀನಾ ಗಡಿ ಸಂಘರ್ಷದ ಬಗ್ಗೆ ನರವಾಣೆ ಅವರು ಬರೆದಿರುವ ವಿಷಯಗಳನ್ನು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರಸ್ತಾಪಿಸಲು ಬಯಸಿದ್ದರು.
ಆದರೆ, ಪುಸ್ತಕವು ಅಧಿಕೃತವಾಗಿ ಪ್ರಕಟಗೊಳ್ಳದ ಕಾರಣ, ಅದರ ಉಲ್ಲೇಖಗಳನ್ನು ಸಂಸತ್ತಿನಲ್ಲಿ ಬಳಸಲು ಸ್ಪೀಕರ್ ಅನುಮತಿ ನಿರಾಕರಿಸಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಇಂತಹ ಪುಸ್ತಕವೇ ಅಸ್ತಿತ್ವದಲ್ಲಿಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಈ ಪುಸ್ತಕದ ಬಗ್ಗೆ ಯುವಕರು ತಿಳಿದುಕೊಳ್ಳಬೇಕು. ಸರ್ಕಾರವು ಸತ್ಯವನ್ನು ಮರೆಮಾಚುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಇನ್ನು ಇದೇ ವಿಚಾರವನ್ನಿಟ್ಟುಕೊಂಡು ಸಂಸತ್‌ನಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಕಾಂಗ್ರೆಸ್‌ನ 7 ಮತ್ತು ಸಿಪಿಐ(ಎಂ)ನ ಓರ್ವ ಸಂಸದ ಸೇರಿದಂತೆ ಒಟ್ಟು 8 ಸಂಸದರನ್ನು ಬಜೆಟ್ ಅಧಿವೇಶನದ ಅಂತ್ಯದವರೆಗೆ ಅಮಾನತುಗೊಳಿಸಲಾಗಿದೆ,
Advertisement