Valentine's Day: ಕಾರಿನಲ್ಲೇ ಗೆಳತಿಗೆ ಗುಂಡಿಕ್ಕಿ ಹತ್ಯೆ, ಬಳಿಕ ತಾನೂ ಶೂಟ್ ಮಾಡಿಕೊಂಡ ಪಾಗಲ್ ಪ್ರೇಮಿ!

ಕಾರಿನೊಳಗೆ ಒಬ್ಬ ಹುಡುಗ ಮತ್ತು ಹುಡುಗಿಯ ಶವ ಪತ್ತೆಯಾಗಿದ್ದು, ಅವರ ತಲೆಗೆ ಗುಂಡೇಟಿನ ಗಾಯಗಳಾಗಿವೆ. ಹುಡುಗನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದ್ದು, ಕಾರನ್ನು ಒಳಗಿನಿಂದ ಲಾಕ್ ಮಾಡಲಾಗಿದೆ.
Man shoots girlfriend, then himself in car on Valentine's Day
ಕಾರಿನಲ್ಲೇ ಗೆಳತಿಗೆ ಗುಂಡಿಕ್ಕಿ ಹತ್ಯೆ
Updated on

ನೋಯ್ಡಾ: ಪ್ರೇಮಿಗಳ ದಿನದಂದೇ ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 107 ರಲ್ಲಿ ನಿಲ್ಲಿಸಿದ್ದ ಕಾರಿನೊಳಗೆ 32 ವರ್ಷದ ವ್ಯಕ್ತಿಯೊಬ್ಬ ತನ್ನ 26 ವರ್ಷದ ಗೆಳತಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದು, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಸೆಕ್ಟರ್ 39 ಪೊಲೀಸ್ ಠಾಣೆ ವ್ಯಾಪ್ತಿಯ ದಾದ್ರಿ ರಸ್ತೆಯ ಕಂಬ ಸಂಖ್ಯೆ 84 ರ ಬಳಿ ನಿಲ್ಲಿಸಿದ್ದ ಕಾರಿನೊಳಗೆ ಪ್ರೇಮಿಗಳ ಶವಗಳು ಪತ್ತೆಯಾಗಿವೆ.

DL14CL6473 ನೋಂದಣಿ ಸಂಖ್ಯೆಯ ಕಾರಿನ ಬಗ್ಗೆ ಮಾಹಿತಿ ನೀಡಲಾಗಿದ್ದು, ತಂಡ ಸ್ಥಳಕ್ಕೆ ಧಾವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Man shoots girlfriend, then himself in car on Valentine's Day
ಪಂಜಾಬ್: ತರಗತಿಯಲ್ಲೇ ಗೆಳತಿಗೆ ಗುಂಡಿಕ್ಕಿ ಕೊಂದು, ತಾನೂ ಶೂಟ್ ಮಾಡಿಕೊಂಡ ಕಾನೂನು ವಿದ್ಯಾರ್ಥಿ!

"ಕಾರಿನೊಳಗೆ ಒಬ್ಬ ಹುಡುಗ ಮತ್ತು ಹುಡುಗಿಯ ಶವ ಪತ್ತೆಯಾಗಿದ್ದು, ಅವರ ತಲೆಗೆ ಗುಂಡೇಟಿನ ಗಾಯಗಳಾಗಿವೆ. ಹುಡುಗನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದ್ದು, ಕಾರನ್ನು ಒಳಗಿನಿಂದ ಲಾಕ್ ಮಾಡಲಾಗಿದೆ. ಪ್ರಾಥಮಿಕವಾಗಿ ಇದು ಆತ್ಮಹತ್ಯೆ ಪ್ರಕರಣವೆಂದು ತೋರುತ್ತದೆ" ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತೆ(ನೋಯ್ಡಾ) ಮನೀಷಾ ಸಿಂಗ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಮೃತರನ್ನು ದೆಹಲಿಯ ತ್ರಿಲೋಕಪುರಿಯ ನಿವಾಸಿ ಸುಮಿತ್ ಮತ್ತು ನೋಯ್ಡಾದ ಸೆಕ್ಟರ್ 101 ರ ನಿವಾಸಿ ರೇಖಾ ಎಂದು ಗುರುತಿಸಲಾಗಿದೆ. ಅವರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ವಿಧಿವಿಜ್ಞಾನ ತಂಡ ಘಟನಾ ಸ್ಥಳವನ್ನು ಪರಿಶೀಲಿಸಿದೆ. ತನಿಖಾ ವರದಿಯನ್ನು ಸಿದ್ಧಪಡಿಸಲಾಗಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com