

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್'ನ ಕಾಂಕ್ರೀಟ್ ಸ್ಲ್ಯಾಬ್ ವೊಂದು ಆಟೋ ಹಾಗೂ ಕಾರಿನ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಎಲ್‌ಬಿಎಸ್ ರಸ್ತೆಯ ಜಾನ್ಸನ್ & ಜಾನ್ಸನ್ ಕಂಪನಿಯ ಬಳಿ ಮಧ್ಯಾಹ್ನ 12.20 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಆಟೋ ಹಾಗೂ ಕಾರಿನ ಮೇಲೆ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದಿದೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸ್ ತಂಡ, ಮೆಟ್ರೋ ಸಿಬ್ಬಂದಿ, ಸ್ಥಳೀಯ ಅಧಿಕಾರಿಗಳು ಮತ್ತು 108 ಆಂಬ್ಯುಲೆನ್ಸ್ ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಾಂಕ್ರೀಟ್ ಸ್ಲ್ಯಾಬ್ ಕುಸಿತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
Advertisement