ಪಂಜಾಬ್: ಮಹಾ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಿಎಂ ಮಾನ್ ಆಸ್ಪತ್ರೆಗೆ ದಾಖಲು!

ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದರ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಂದಿಲ್ಲ.
CM Bhagwant Mann
ಮುಖ್ಯಮಂತ್ರಿ ಭಗವಂತ್ ಮಾನ್
Updated on

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಭಾನುವಾರ ಮಧ್ಯಾಹ್ನ ಅಧಿಕ ರಕ್ತದೊತ್ತಡದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಅವರನ್ನು ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದಕ್ಕೂ ಮುನ್ನಾ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಧುರಿಯಲ್ಲಿ ನಡೆದ ಮಹಾ ಶಿವರಾತ್ರಿ ಕಾರ್ಯಕ್ರಮಗಳಲ್ಲಿ ಮಾನ್ ಭಾಗವಹಿಸಿದ್ದರು.

ಅವರಿಂದು ಫಜಿಲ್ಕಾಗೆ ಹೋಗಬೇಕಿತ್ತು, ಆದರೆ ಅನಾರೋಗ್ಯದ ಕಾರಣ ಅವರನ್ನು ಮಧ್ಯಾಹ್ನ 3.20 ರ ಸುಮಾರಿಗೆ ಮೊಹಾಲಿಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದರ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಂದಿಲ್ಲ.

CM Bhagwant Mann
ಮಹಾ ಶಿವರಾತ್ರಿ: ಅಗಲಿದ ಆತ್ಮಗಳಿಗೆ ಪಿತೃ (ಬಲಿ) ತರ್ಪಣದ ಸಮಯ ಯಾವುದು? ಶಾಸ್ತ್ರೋಕ್ತ ವಿಧಾನ ಹೇಗೆ?

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಳಲಿಕೆ ಮತ್ತು ಕಡಿಮೆ ಹೃದಯ ಬಡಿತ ಸಮಸ್ಯೆಯಿಂದಾಗಿ ಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅದಕ್ಕೂ ಮುನ್ನ ಇದೇ ಆಸ್ಪತ್ರೆಯಲ್ಲಿ ಬ್ಯಾಕ್ಟೀರಿಯಾ ಸೋಂಕಿಗೆ ಚಿಕಿತ್ಸೆ ಪಡೆದಿದ್ದರು.

ಇಂದು ಬೆಳಗ್ಗೆ ಮಹಾಶಿವರಾತ್ರಿಯ ನಿಮಿತ್ತ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಉಸ್ತುವಾರಿ ಮನೀಶ್ ಸಿಸೋಡಿಯಾ ಅವರೊಂದಿಗೆ ಧುರಿ ಕ್ಷೇತ್ರದ ರಾಂಜ್ಕೆ ಗ್ರಾಮದ ರಣಕೇಶ್ವರ ಮಹಾದೇವ ದೇವಸ್ಥಾನಕ್ಕೆ ಭೇಟಿ ನೀಡಿ ಐತಿಹಾಸಿಕ ಸಿದ್ಧ ಪೀಠದಲ್ಲಿ ಭಗವಂತ್ ಮಾನ್ ಪೂಜೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com