ಭಾರತದ ರೈತರಿಗೆ ದ್ರೋಹ: ಅಮೆರಿಕ ವ್ಯಾಪಾರ ಒಪ್ಪಂದ ಬಗ್ಗೆ ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ!

ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತೀಯ ರೈತರಿಗೆ ದ್ರೋಹ ಮಾಡುವುದನ್ನು ನಾವು ನೋಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.
Rahul Gandhi
ರಾಹುಲ್ ಗಾಂಧಿ
Updated on

ನವದೆಹಲಿ: ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ವಾಗ್ದಾಳಿ ನಡೆಸಿದ್ದು, ಭಾರತೀಯ ರೈತರಿಗೆ ದ್ರೋಹ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಒಪ್ಪಂದದ ಮೂಲಕ ಸರ್ಕಾರ ಮಾರಾಟವಾಗಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಈ ವಿಷಯವು ತಕ್ಷಣದ ರಾಜಕೀಯವನ್ನು ಮೀರಿ, ಭಾರತದ ಭವಿಷ್ಯದ ಪ್ರಶ್ನೆಯಾಗಿದೆ. ದೇಶ ತನ್ನ ಕೃಷಿ ಕ್ಷೇತ್ರದ ಮೇಲೆ ದೀರ್ಘಾವಧಿಯ ಹಿಡಿತ ಪಡೆಯಲು ಮತ್ತೊಂದು ರಾಷ್ಟ್ರಕ್ಕೆ ಅವಕಾಶ ನೀಡುತ್ತಿದೆಯೇ ಎಂದು ಅವರು ಕೇಳಿದ್ದಾರೆ.

ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತೀಯ ರೈತರಿಗೆ ದ್ರೋಹ ಮಾಡುವುದನ್ನು ನಾವು ನೋಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಡ್ರೈ ಡಿಸ್ಟಿಲರ್ಸ್ ಧಾನ್ಯಗಳನ್ನು (DDG) ಆಮದು ಮಾಡಿಕೊಳ್ಳುವುದರ ಅರ್ಥವೇನು? ಭಾರತೀಯ ಜಾನುವಾರುಗಳಿಗೆ ಅಮೆರಿಕದ ಮೆಕ್ಕೆಜೋಳದಿಂದ ತಯಾರಿಸಿದ ಡಿಸ್ಟಿಲರ್ ಗಳ ಧಾನ್ಯಗಳನ್ನು ನೀಡಲಾಗುತ್ತಿದೆಯೇ? ಹೀಗೆ ಮಾಡುವುದರಿಂದ ನಮ್ಮ ಹಾಲಿನ ಉತ್ಪನ್ನಗಳು ಅಮೆರಿಕದ ಕೃಷಿ ಉದ್ಯಮದ ಮೇಲೆ ಅವಲಂಬಿತವಾಗುವಂತೆ ಮಾಡುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಭಾರತ ಅಮೆರಿಕದಿಂದ ಸೋಯಾ ಎಣ್ಣೆಯನ್ನು ಆಮದು ಮಾಡಿಕೊಳ್ಳಲು ಅನುಮತಿ ನೀಡಿದರೆ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಸೇರಿದಂತೆ ದೇಶಾದ್ಯಂತ ಸೋಯಾ ಬೆಳೆಯುವ ರೈತರ ಮೇಲೆ ನೇರ ಪರಿಣಾಮ ಬೀರಲಿದೆ. ಮಾತ್ರವಲ್ಲದೇ ತೀವ್ರ ಬೆಲೆ ನಷ್ಟ ಉಂಟಾಗಲಿದೆ. ಇದನ್ನು ಭಾರತದ ರೈತರು ಹೇಗೆ ತಡೆದುಕೊಳ್ತಾರೆ ಎಂದು ಪ್ರಶ್ನಿಸಿದ್ದಾರೆ.

Rahul Gandhi
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: 'ಈ ದೇಶದಲ್ಲಿ ಇಂತಹ 'ಮಹಾಮೂರ್ಖ' ಎಲ್‌ಒಪಿಯನ್ನು ಎಂದಿಗೂ ನೋಡಿಲ್ಲ'

ವ್ಯಾಪಾರೇತರ ಅಡೆತಡೆಗಳನ್ನು ತೆಗೆದುಹಾಕುವುದರ ಅರ್ಥವೇನು? ಮುಂದಿನ ದಿನಗಳಲ್ಲಿ ಮಾರ್ಪಡಿಸಿದ ತಳಿಗಳ ಮೇಲಿನ ತಮ್ಮ ನಿಲುವನ್ನು ಸಡಿಲಗೊಳಿಸಿ, ಸಂಗ್ರಹಣೆಯನ್ನು ಕಡಿಮೆ ಮಾಡುವ ಸಾಧ್ಯತೆ ಇದೆ ಮತ್ತು ಬೋನಸ್ ನ್ನು ಕಡಿಮೆ ಮಾಡಲು ಭಾರತದ ರೈತರ ಮೇಲೆ ಒತ್ತಡ ಹೇರಲಾಗುವುದಿಲ್ಲವೇ ಎಂದು ಅವರು ಕೇಳಿದ್ದಾರೆ. ಅಮೆರಿಕ ಹಾಗೂ ಭಾರತ ನಡುವಿನ ಈ ವ್ಯಾಪಾರ ಒಮ್ಮೆ ಆರಂಭವಾದರೆ, ಇದು ಪ್ರತಿ ವರ್ಷವೂ ದೊಡ್ಡದಾಗುತ್ತದೆ. ಅದನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com