ಓಪನ್ ಆಗಿ ಮಾಂಸ ಮಾರಾಟ ನಿಷೇಧಕ್ಕೆ ಮುಂದಾದ ಬಿಹಾರ!

ಕಂದಾಯ ಮತ್ತು ಭೂ ಸುಧಾರಣಾ ಇಲಾಖೆಯನ್ನು ಹೊಂದಿರುವ ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರು ರಾಜ್ಯಾದ್ಯಂತ ಪರವಾನಗಿ ಪಡೆದ ಮಾರಾಟಗಾರರಿಗೆ ಮಾತ್ರ ಮಾಂಸ ಮಾರಾಟ ಮಾಡಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.
Bihar to ban open sales of meat
ಸಾಂದರ್ಭಿಕ ಚಿತ್ರ
Updated on

ಪಾಟ್ನಾ: ಧಾರ್ಮಿಕ ಸ್ಥಳಗಳ ಬಳಿ ಮಾಂಸ ಮಾರಾಟವನ್ನು ನಿಷೇಧಿಸುವ ಹಿಂದಿನ ಆದೇಶವನ್ನು ಅನುಸರಿಸಿ ಬಿಹಾರ ಸರ್ಕಾರವು ಈಗ ಓಪನ್ ಆಗಿ ಮಾಂಸ ಮಾರಾಟವನ್ನು ಮತ್ತಷ್ಟು ನಿರ್ಬಂಧಿಸಲು ಮುಂದಾಗಿದೆ.

ಕಂದಾಯ ಮತ್ತು ಭೂ ಸುಧಾರಣಾ ಇಲಾಖೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರು ಸೋಮವಾರ ರಾಜ್ಯಾದ್ಯಂತ ಪರವಾನಗಿ ಪಡೆದ ಮಾರಾಟಗಾರರಿಗೆ ಮಾತ್ರ ಮಾಂಸ ಮಾರಾಟ ಮಾಡಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.

"ಮಾಂಸ ಮಾರಾಟಕ್ಕೆ ಸಂಬಂಧಿಸಿದಂತೆ ಸರ್ಕಾರವು ಹೊಸ ನಿಯಮಗಳನ್ನು ರೂಪಿಸುತ್ತಿದೆ ಮತ್ತು ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಯಾವುದೇ ಪರಿಸ್ಥಿತಿಯಲ್ಲಿಯೂ ಓಪನ್ ಆಗಿ ಮಾಂಸ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ. ಸರಿಯಾದ ಪರವಾನಗಿ ಹೊಂದಿರುವವರಿಗೆ ಮಾತ್ರ ಮಾಂಸ ಮಾರಾಟ ಮಾಡಲು ಅವಕಾಶ ನೀಡಲಾಗುವುದು" ಎಂದು ಸಿನ್ಹಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Bihar to ban open sales of meat
ಮಾಂಸ ಮಾರಾಟ ನಿಷೇಧ: 'ಜನರ ಆಹಾರ ಪದ್ಧತಿಯನ್ನು ಸರ್ಕಾರ ನಿರ್ಧರಿಸಬಾರದು'; Raj Thackeray

ಹೊಸ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಅವರು ಎಚ್ಚರಿಸಿದ್ದಾರೆ.

ಕಳೆದ ವರ್ಷ ಮಾರ್ಚ್‌ನಲ್ಲಿ, ಉತ್ತರ ಪ್ರದೇಶ ಸರ್ಕಾರವು ಧಾರ್ಮಿಕ ಸ್ಥಳಗಳ ಸುತ್ತ 500 ಮೀಟರ್ ಒಳಗೆ ಮಾಂಸ ಮಾರಾಟವನ್ನು ನಿಷೇಧಿಸಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com