India AI Impact Expo 2026: ಆವಿಷ್ಕಾರ, ನಾವೀನ್ಯತೆಗಳ ಪ್ರಬಲ ಸಂಗಮ- ಪ್ರಧಾನಿ ಮೋದಿ

ಭಾರತದ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026 ಕಲ್ಪನೆಗಳು, ನಾವೀನ್ಯತೆ ಮತ್ತು ಉದ್ದೇಶಗಳ ಪ್ರಬಲ ಸಂಗಮವಾಗಿದೆ. ಜಾಗತಿಕ ಒಳಿತಿಗಾಗಿ ಕೃತಕ ಬುದ್ಧಿಮತ್ತೆಯ ಭವಿಷ್ಯವನ್ನು ರೂಪಿಸುವಲ್ಲಿ ಇದು ಭಾರತೀಯ ಪ್ರತಿಭೆಗಳ ಅಸಾಧಾರಣ ಸಾಮರ್ಥ್ಯವನ್ನು ಪ್ರದರ್ಶಿಸಿದೆ.
PM Modi
ಪ್ರಧಾನಿ ಮೋದಿ
Updated on

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026 ಆಲೋಚನೆ, ಆವಿಷ್ಕಾರ, ನಾವೀನ್ಯತೆ ಮತ್ತು ಉದ್ದೇಶಗಳ ಪ್ರಬಲ ಸಂಗಮ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬಣ್ಣಿಸಿದ್ದಾರೆ.

ವೇಗವಾಗಿ ಮುಂದುವರಿಯುತ್ತಿರುವ ಜಾಗತಿಕ ಹೈಟೆಕ್ ಭೂದೃಶ್ಯಕ್ಕೆ ಅನುಗುಣವಾಗಿ ಆಡಳಿತ ಮತ್ತು ದೈನಂದಿನ ಜೀವನದಲ್ಲಿ ತಂತ್ರಜ್ಞಾನದ ವ್ಯಾಪಕ ಬಳಕೆಯನ್ನು ಪ್ರಧಾನಿ ಮೋದಿ ಒತ್ತಿ ಹೇಳಿದ್ದಾರೆ.

ಸೋಮವಾರ ಎಕ್ಸ್‌ಪೋವನ್ನು ಉದ್ಘಾಟಿಸಿದ ನಂತರ, ಪ್ರಧಾನಿ ಮೋದಿ ಅವರು ತಮ್ಮ ಬ್ಯುಸಿ ವೇಳಾಪಟ್ಟಿಯ ಹೊರತಾಗಿಯೂ ವಿವಿಧ ಸ್ಟಾಲ್‌ಗಳಿಗೆ ಭೇಟಿ ನೀಡಿ, ಎಕ್ಸ್‌ಪೋವನ್ನು ವೀಕ್ಷಿಸಿದರು. ಅಲ್ಲದೆ ಪ್ರದರ್ಶಕರೊಂದಿಗೆ ಸಂವಹನ ನಡೆಸಿದರು ಮತ್ತು ಕೃತಕ ಬುದ್ಧಿಮತ್ತೆಗೆ ಸಂಬಂಧಿಸಿದ ಪ್ರದರ್ಶನಗಳು ಹಾಗೂ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ-ಚಾಲಿತ ವಲಯದ ಇತರ ಬೆಳವಣಿಗೆಗಳ ಬಗ್ಗೆ ತಿಳಿದುಕೊಂಡರು.

ಈ ಕುರಿತು ಇಂದು ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ, ಭಾರತದ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026 ಕಲ್ಪನೆಗಳು, ನಾವೀನ್ಯತೆ ಮತ್ತು ಉದ್ದೇಶಗಳ ಪ್ರಬಲ ಸಂಗಮವಾಗಿದೆ. ಜಾಗತಿಕ ಒಳಿತಿಗಾಗಿ ಕೃತಕ ಬುದ್ಧಿಮತ್ತೆಯ ಭವಿಷ್ಯವನ್ನು ರೂಪಿಸುವಲ್ಲಿ ಇದು ಭಾರತೀಯ ಪ್ರತಿಭೆಗಳ ಅಸಾಧಾರಣ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ, ಮಾನವ ಪ್ರಗತಿಗಾಗಿ ಎಐಅನ್ನು ಜವಾಬ್ದಾರಿಯುತವಾಗಿ, ಸಮಗ್ರವಾಗಿ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳುವ ಭಾರತದ ಬದ್ಧತೆಯನ್ನು ಎಕ್ಸ್‌ಪೋ ಪುನರುಚ್ಚರಿಸಿದೆ ಎಂದಿದ್ದಾರೆ.

PM Modi
AI ಬಳಕೆಯಲ್ಲಿ ಮುಂಚೂಣಿಯಲ್ಲಿ ಭಾರತ: ಜಗತ್ತಿಗೆ ಪರಿಹಾರ ರೂಪಿಸುತ್ತೇವೆ- ಪ್ರಧಾನಿ ಮೋದಿ

"ಸರ್ವಜನ ಹಿತಾಯ, ಸರ್ವಜನ ಸುಖಾಯ ಅಥವಾ ಎಲ್ಲರಿಗೂ ಕಲ್ಯಾಣ, ಎಲ್ಲರಿಗೂ ಸಂತೋಷ, ಇದು ಮಾನವ ಕೇಂದ್ರಿತ ಪ್ರಗತಿಗಾಗಿ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಳ್ಳುವ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ" ಎಂದು ಪ್ರಧಾನಿ ಹೇಳಿದ್ದಾರೆ.

ಎಕ್ಸ್​ಪೋವು ಜಾಗತಿಕ ತಂತ್ರಜ್ಞಾನ ಘಟಕ, ಸ್ಟಾರ್ಟ್​ಅಪ್​, ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ಮತ್ತು ಅಂತಾರಾಷ್ಟ್ರೀಯ ಪಾಲುದಾರಿಕೆಯನ್ನು ಒಂದೇ ವೇದಿಕೆಗೆ ತಂದಿದೆ ಎಂದು ತಿಳಿಸಿದರು.

ಭಾರತ್ ಮಂಟಪದಲ್ಲಿ 70,000 ಚದರ್​ ಮೀಟರ್‌ಗಿಂತಲೂ ಹೆಚ್ಚು ವಿಸ್ತೀರ್ಣದ 10ಕ್ರೀಡಾಂಗಣಗಳಲ್ಲಿ ಹರಡಿರುವ ಈ ಎಕ್ಸ್‌ಪೋ ಜಾಗತಿಕ ತಂತ್ರಜ್ಞಾನ ಸಂಸ್ಥೆಗಳು, ನವೋದ್ಯಮಗಳು, ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳು, ಕೇಂದ್ರ ಸಚಿವಾಲಯಗಳು, ರಾಜ್ಯ ಸರ್ಕಾರಗಳು ಮತ್ತು ಅಂತಾರಾಷ್ಟ್ರೀಯ ಪಾಲುದಾರರನ್ನು ಒಟ್ಟುಗೂಡಿಸಿದೆ.

ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಈ ಎಕ್ಸ್​ಪೋದಲ್ಲಿ 13 ದೇಶಗಳು ಕೃತಕ ಬುದ್ಧಿಮತ್ತೆಯ ಪರಿಸರ ವ್ಯವಸ್ಥೆಯ ಅಂತಾರಾಷ್ಟ್ರೀಯ ಸಹಕಾರವನ್ನು ಪ್ರದರ್ಶಿಸಿವೆ. ಇದರಲ್ಲಿ ಆಸ್ಟ್ರೇಲಿಯಾ, ಜಪಾನ್, ರಷ್ಯಾ, ಯುನೈಟೆಡ್ ಕಿಂಗ್‌ಡಮ್, ಫ್ರಾನ್ಸ್, ಜರ್ಮನಿ, ಇಟಲಿ, ನೆದರ್‌ಲ್ಯಾಂಡ್ಸ್, ಸ್ವಿಟ್ಜರ್‌ಲ್ಯಾಂಡ್, ಸೆರ್ಬಿಯಾ, ಎಸ್ಟೋನಿಯಾ, ತಜಿಕಿಸ್ತಾನ್ ಮತ್ತು ಆಫ್ರಿಕಾ ಸೇರಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com