

ಪುಣೆ: ಮಹಾರಾಷ್ಟ್ರದ ಪುಣೆ ಪೊಲೀಸರು ಬುಧವಾರ ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 11 ಬಾಂಗ್ಲಾದೇಶಿ ಮಹಿಳೆಯರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಹಿಳೆಯರು ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಇತರ ವಸತಿ ದಾಖಲೆಗಳನ್ನು ಹೊಂದಿರುವುದು ಸಹ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.
ಖಚಿತ ಮಾಹಿತಿ ಆಧರಿಸಿ, ನಗರದ ಬುಧವಾರ್ ಪೇಟ್‌ನ "ರೆಡ್ ಲೈಟ್ ಏರಿಯಾ"ದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ 11 ಬಾಂಗ್ಲಾದೇಶಿ ಮಹಿಳೆಯರು ಸೇರಿದಂತೆ 22 ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಕ್ರುಶಿಕೇಶ್ ರಾವಾಲೆ ಅವರು ತಿಳಿಸಿದ್ದಾರೆ.
"ನಾವು 22 ಮಹಿಳೆಯರನ್ನು ಬಂಧಿಸಿದ್ದೇವೆ. ಅವರಲ್ಲಿ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳಾಗಿದ್ದು, ಅವರು ಕಳೆದ ಕೆಲವು ತಿಂಗಳುಗಳಿಂದ ನಮ್ಮ ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆ ಎಂದು ಕಂಡುಬಂದಿದೆ. ನಾವು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ" ಎಂದು ಅವರು ಹೇಳಿದ್ದಾರೆ.
Advertisement