Rajya Sabha polls: ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ

ಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಲ್ಲಿ ಖಾಲಿಯಾಗುತ್ತಿರುವ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ನಡೆಯಲಿದೆ.
Election Commission of India
ಚುನಾವಣಾ ಆಯೋಗ
Updated on

ನವದೆಹಲಿ: ಏಪ್ರಿಲ್‌ನಲ್ಲಿ ವಿವಿಧ ದಿನಾಂಕಗಳಲ್ಲಿ ಖಾಲಿಯಾಗುತ್ತಿರುವ 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸುವ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ(ECI) ಬುಧವಾರ ಪ್ರಕಟಿಸಿದೆ.

ಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಲ್ಲಿ ಖಾಲಿಯಾಗುತ್ತಿರುವ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ನಡೆಯಲಿದೆ.

ವೇಳಾಪಟ್ಟಿಯ ಪ್ರಕಾರ, ಫೆಬ್ರವರಿ 26 ರಂದು ಅಧಿಸೂಚನೆ ಹೊರಡಿಸುವುದರೊಂದಿಗೆ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ. ನಾಮಪತ್ರ ಸಲ್ಲಿಸಲು ಮಾರ್ಚ್ 5 ಕೊನೆಯ ದಿನವಾಗಿದ್ದು, ಮಾರ್ಚ್ 6 ರಂದು ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಮಾರ್ಚ್ 9 ರವರೆಗೆ ತಮ್ಮ ನಾಮಪತ್ರಗಳನ್ನು ಹಿಂಪಡೆಯಲು ಅವಕಾಶವಿರುತ್ತದೆ.

Election Commission of India
BMC elections ವಿವಾದ: ಇತರ ಚುನಾವಣೆಗಳಲ್ಲಿ ಬಳಕೆಯಾದ ಶಾಯಿಯೇ ಇಲ್ಲೂ ಬಳಕೆ- ಮಹಾರಾಷ್ಟ್ರ ಚುನಾವಣಾ ಆಯೋಗ

ಮಾರ್ಚ್ 16 ರಂದು ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮಾರ್ಚ್ 20 ರೊಳಗೆ ಸಂಪೂರ್ಣ ಚುನಾವಣಾ ಪ್ರಕ್ರಿಯೆಯು ಮುಕ್ತಾಯಗೊಳ್ಳುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.

ಹೆಚ್ಚುವರಿಯಾಗಿ, ಸುಗಮ ಮತ್ತು ನ್ಯಾಯಯುತ ಚುನಾವಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ವೀಕ್ಷಕರನ್ನು ನೇಮಿಸಲಾಗುತ್ತದೆ ಎಂದು ಆಯೋಗ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com