

ನವದೆಹಲಿ: ದೆಹಲಿಯಲ್ಲಿರುವ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಇಂಡಿಯಾ AI ಇಂಪ್ಯಾಕ್ಟ್ 2026ರ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದರು. ಈ ಘಟನೆ ಕುರಿತಂತೆ ಸಾರ್ವಜನಿಕವಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಫೆಬ್ರವರಿ 19-21ರವರೆಗೆ ನಡೆಯುತ್ತಿರುವ AI ಇಂಪ್ಯಾಕ್ಟ್ 2026ರ ಶೃಂಗಸಭೆಗೆ ಸುಮಾರು 10 ಯುವ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಿ ತಮ್ಮ ಶರ್ಟ್‌ಗಳನ್ನು ತೆಗೆದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಭಾರತ-ಯುಎಸ್ ಒಪ್ಪಂದದ ಮೂಲಕ ಸರ್ಕಾರವು ರಾಷ್ಟ್ರೀಯ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಘಟನೆಯಿಂದ ಹೌರಾರಿದ ಶೃಂಗಸಭೆಗೆ ಬಂದಿದ್ದ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾಲಿನಿಂದ ಒದ್ದು, ಅಟ್ಟಾಟಿಸಿ ಭಾರತ್ ಮಂಟಪದ ಆವರಣದಿಂದ ಹೊರಕ್ಕೆ ಓಡಿಸಿದ್ದಾರೆ.
ಈ ವಿಷಯವು AI ಶೃಂಗಸಭೆಯಲ್ಲಿ ಭದ್ರತಾ ಲೋಪಕ್ಕೂ ಸಂಬಂಧಿಸಿದೆ. ಪ್ರತಿಭಟನಾಕಾರರು QR-ಕೋಡೆಡ್ ಪಾಸ್‌ಗಳನ್ನು ಬಳಸಿಕೊಂಡು ಸ್ಥಳಕ್ಕೆ ಪ್ರವೇಶಿಸಿದ್ದಾರೆ ಎಂದು ವರದಿಯಾಗಿದೆ. ಇದು ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತದೆ. ಇನ್ನು ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕೆಲವು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ತಿಲಕ್ ಮಾರ್ಗ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ.
Advertisement