ಲಷ್ಕರ್ ಉಗ್ರರ ದಾಳಿ ಭೀತಿ: ದೆಹಲಿಯ ಪ್ರಮುಖ ಧಾರ್ಮಿಕ- ಐತಿಹಾಸಿಕ ತಾಣಗಳಲ್ಲಿ ತೀವ್ರ ಭದ್ರತೆ

ಚಾಂದಿನಿ ಚೌಕ್ ಪ್ರದೇಶದಲ್ಲಿರುವ ದೇವಾಲಯವೊಂದು ಅವರ ದಾಳಿಯ ಗುರಿಯಲ್ಲಿದೆ ಎಂಬ ನಿರ್ದಿಷ್ಟ ಮಾಹಿತಿ ಲಭ್ಯವಾಗಿದೆ.
Intelligence agencies indicated that LeT could be attempting to carry out an Improvised Explosive Device (IED)-based attack
ಗುಪ್ತಚರ ಸಂಸ್ಥೆಗಳ ಪ್ರಕಾರ, ಲಷ್ಕರ್-ಎ-ತೈಬಾ (LeT) ಇಂಪ್ರೊವೈಸ್ಡ್ ಎಕ್ಸ್‌ಪ್ಲೋಸಿವ್ ಡಿವೈಸ್ (IED) ಬಳಸಿ ದಾಳಿ ನಡೆಸಲು ಪ್ರಯತ್ನಿಸುತ್ತಿರಬಹುದು ಎಂಬ ಮಾಹಿತಿ ಸಿಕ್ಕಿದೆ
Updated on

ನವದೆಹಲಿ: ಉಗ್ರ ದಾಳಿ ಸಾಧ್ಯತೆಯ ಕುರಿತು ಗುಪ್ತಚರ ಮಾಹಿತಿಗಳು ಬಂದಿರುವ ಹಿನ್ನೆಲೆಯಲ್ಲಿ, ದೆಹಲಿಯ ಪ್ರಮುಖ ಧಾರ್ಮಿಕ ಮತ್ತು ಐತಿಹಾಸಿಕ ತಾಣಗಳಲ್ಲಿ ಭದ್ರತೆಯನ್ನು ಕಠಿಣಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಂಪುಕೋಟೆ ಸುತ್ತಮುತ್ತ ಹಾಗೂ ಚಾಂದಿನಿ ಚೌಕ್ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಎ-ತೈಬಾ (LeT) ಭಾರತದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ, ಕೆಂಪುಕೋಟೆ ಸಮೀಪ ಸ್ಫೋಟದ ಭೀತಿಯ ಬಗ್ಗೆ ಎಚ್ಚರಿಕೆ ಜಾರಿಗೊಳಿಸಲಾಗಿದೆ.

ಮೂಲಗಳ ಪ್ರಕಾರ, ಚಾಂದಿನಿ ಚೌಕ್ ಪ್ರದೇಶದಲ್ಲಿರುವ ದೇವಾಲಯವೊಂದು ಅವರ ದಾಳಿಯ ಗುರಿಯಲ್ಲಿದೆ ಎಂಬ ನಿರ್ದಿಷ್ಟ ಮಾಹಿತಿ ಲಭ್ಯವಾಗಿದೆ.

Intelligence agencies indicated that LeT could be attempting to carry out an Improvised Explosive Device (IED)-based attack
Delhi Blast: ಆಪರೇಷನ್ ಸಿಂಧೂರ್ ಗೆ ಸೇಡು? 20 ಟೈಮರ್, 3000 ಕೆಜಿ ಸ್ಫೋಟಕ..; ಉಗ್ರರ ಯೋಜನೆ ಕಾರ್ಯಗತವಾಗಿದ್ದರೆ ಅತಿದೊಡ್ಡ ಭಯೋತ್ಪಾದಕ ದಾಳಿ!

ಈ ಗುಪ್ತಚರ ಮಾಹಿತಿಗಳನ್ನು ಅಧಿಕಾರಿಗಳು ತೀವ್ರ ಪರಿಶೀಲನೆಗೊಳಪಡಿಸಿದ್ದು, ಮೌಲ್ಯಮಾಪನ ಮಾಡಲಾಗುತ್ತಿದೆ, ಸೂಕ್ಷ್ಮ ಧಾರ್ಮಿಕ ಸ್ಥಳಗಳು ಮತ್ತು ಜನಸಂದಣಿ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗುಪ್ತಚರ ಸಂಸ್ಥೆಗಳ ಪ್ರಕಾರ, ಲಷ್ಕರ್-ಎ-ತೈಬಾ ಇಂಪ್ರೊವೈಸ್ಡ್ ಎಕ್ಸ್‌ಪ್ಲೋಸಿವ್ ಡಿವೈಸ್ (IED) ಆಧಾರಿತ ದಾಳಿ ನಡೆಸಲು ಪ್ರಯತ್ನಿಸಬಹುದು. ಫೆಬ್ರವರಿ 6ರಂದು ಪಾಕಿಸ್ತಾನದ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಪ್ರತೀಕಾರವಾಗಿ ಈ ಯೋಜನೆ ರೂಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸಂಸ್ಥೆಗಳು ಮತ್ತು ದೆಹಲಿ ಪೊಲೀಸರು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಸಿಸಿಟಿವಿ ನಿಗಾವಳಿ, ವಾಹನ ತಪಾಸಣೆ ಮತ್ತು ಸಂವೇದನಶೀಲ ಪ್ರದೇಶಗಳಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮೂಲಕ ನಿಗಾವಳಿ ಬಲಪಡಿಸಲಾಗಿದೆ.

ಬಾಂಬ್ ನಿಷ್ಕ್ರಿಯ ದಳಗಳು, ಶ್ವಾನ ದಳಗಳು ಹಾಗೂ ತ್ವರಿತ ಪ್ರತಿಕ್ರಿಯಾ ತಂಡಗಳನ್ನು ಪ್ರಮುಖ ಸ್ಥಳಗಳಲ್ಲಿ ಸಜ್ಜುಗೊಳಿಸಲಾಗಿದೆ.

ಕಳೆದ ವರ್ಷ ನವೆಂಬರ್ 10ರಂದು ಐತಿಹಾಸಿಕ ಕೆಂಪುಕೋಟೆ ಸಮೀಪ ಕಾರು ಸ್ಫೋಟದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಆ ವೇಳೆ ಸ್ಫೋಟಕಗಳಿಂದ ತುಂಬಿದ್ದ ಕಾರು ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ಸಮೀಪ ಸ್ಫೋಟಗೊಂಡು, ಹತ್ತಿರದ ಹಲವು ವಾಹನಗಳಿಗೆ ಬೆಂಕಿ ತಗುಲಿ ಜನಸಂಚಾರ ಪ್ರದೇಶದಲ್ಲಿ ಭಾರೀ ಆತಂಕ ಉಂಟಾಗಿತ್ತು.

ಎಚ್ಚರಿಕೆ ಬೇಕು, ಆತಂಕ ಬೇಡ

ಭದ್ರತಾ ಸಂಸ್ಥೆಗಳು ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರಲು ಮತ್ತು ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ಚಟುವಟಿಕೆಗಳ ಬಗ್ಗೆ ತಕ್ಷಣವೇ ಪೊಲೀಸರಿಗೆ ಅಥವಾ ತುರ್ತು ಸೇವೆಗಳಿಗೆ ಮಾಹಿತಿ ನೀಡಲು ಮನವಿ ಮಾಡಿವೆ. ಆದರೆ, ಆತಂಕಪಡುವ ಅಗತ್ಯವಿಲ್ಲ; ಕೈಗೊಳ್ಳಲಾಗಿರುವ ಕ್ರಮಗಳು ಮುನ್ನೆಚ್ಚರಿಕಾ ಕ್ರಮಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಗುಪ್ತಚರ ಮಾಹಿತಿ ಸಂಗ್ರಹ ಮತ್ತು ಪರಿಶೀಲನೆ ಪ್ರಕ್ರಿಯೆಗಳು ಮುಂದುವರಿಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com