Kishtwar ಎನ್ಕೌಂಟರ್: ಮೋಸ್ಟ್ ವಾಂಟೆಡ್ ಉಗ್ರ ಸೈಫುಲ್ಲಾ ಸೇರಿ, ಇಬ್ಬರು ಉಗ್ರರು ಹತ!

ಜಮ್ಮು ಕಾಶ್ಮೀರದ ಕಿಶ್ತ್ವಾರ್ ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಶ್ ಇ ಮೊಹಮದ್ ಸಂಘಟನೆ ಓರ್ವ ಉನ್ನತ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತರಾಗಿದ್ದಾರೆ.
Two JeM terrorists killed in encounter
ಕಿಶ್ತ್ವಾರ್ ಎನ್ಕೌಂಟರ್
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತು ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ.

ಜಮ್ಮು ಕಾಶ್ಮೀರದ ಕಿಶ್ತ್ವಾರ್ ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಶ್ ಇ ಮೊಹಮದ್ ಸಂಘಟನೆ ಓರ್ವ ಉನ್ನತ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪರ್ವತ ಕಿಶ್ತ್ವಾರ್ ಜಿಲ್ಲೆಯ ಚತ್ರೂ ಅರಣ್ಯ ಪ್ರದೇಶದಲ್ಲಿ ಭಾನುವಾರ ಸೈನಿಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಹತರಾದ ಇಬ್ಬರು ಉಗ್ರರಲ್ಲಿ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್ ಸೈಫುಲ್ಲಾ ಸೇರಿದ್ದಾರೆ ಎಂದು ಶಂಕಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಗುಪ್ತಚರ ಬ್ಯೂರೋ ಮತ್ತು ಇತರ ಗುಪ್ತಚರ ಮೂಲಗಳಿಂದ ಬಂದ ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ, ಸೇನೆ, ಪೊಲೀಸರು ಮತ್ತು ಅರೆಸೈನಿಕ ಸಿಆರ್‌ಪಿಎಫ್ ಜಂಟಿ ಕಾರ್ಯಾಚರಣೆಯನ್ನು ಕಿಶ್ತ್ವಾರ್‌ನ ಚತ್ರೂ ಅರಣ್ಯ ಪ್ರದೇಶದಲ್ಲಿ ಆಪರೇಷನ್ ಟ್ರಾಶಿ-I ಅಡಿಯಲ್ಲಿ ಕಾರ್ಯಾಚರಣೆ ಆರಂಭಿಸಿ ಅಲ್ಲಿ ಅಡಗಿರುವ ಉಗ್ರರನ್ನು ಪತ್ತೆಹಚ್ಚಿ ನಿರ್ಮೂಲಗೊಳಿಸಲು ಕಾರ್ಯಾಚರಣೆ ಆರಂಭಿಸಿದೆ ಎಂದು ಜಮ್ಮು ಮೂಲದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

Two JeM terrorists killed in encounter
ಭಾರತದಲ್ಲಿ ದಾಳಿಗೆ ಸಂಚು: ಪಾಕ್‌ನ ISI ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಬಂಧನ

ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಭದ್ರತಾ ಪಡೆಗಳು ಉಗ್ರರ ಇರುವಿಕೆ ಪತ್ತೆ ಹಚ್ಚಿದವು. "ಸಿಐಎಫ್ ಡೆಲ್ಟಾ ಪಡೆಗಳು, ಜೆ & ಕೆ ಪೊಲೀಸರು ಮತ್ತು ಸಿಆರ್‌ಪಿಎಫ್‌ನೊಂದಿಗೆ ನಿಕಟ ಸಮನ್ವಯದೊಂದಿಗೆ, ಸುಮಾರು ಬೆಳಿಗ್ಗೆ 11 ಗಂಟೆಗೆ ಸವಾಲಿನ ಭೂಪ್ರದೇಶದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯಿತು ಎಂದು ವಕ್ತಾರರು ಹೇಳಿದರು.

ಈ ವೇಳೆ ಇಬ್ಬರು ಉಗ್ರರು ಹತರಾಗಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಎರಡು ಎಕೆ-47 ರೈಫಲ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ವಕ್ತಾರರು ತಿಳಿಸಿದ್ದಾರೆ.

ಇಂದು ಎನ್ಕೌಂಟರ್ ನಲ್ಲಿ ಹತನಾದ, ಸೈಫುಲ್ಲಾ ಕಳೆದ ಕೆಲವು ವರ್ಷಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಮತ್ತು ಭದ್ರತಾ ಪಡೆಗಳ ಮೇಲಿನ ಹಲವಾರು ದಾಳಿಗಳಲ್ಲಿ ಭಾಗಿಯಾಗಿದ್ದ, ಈ ಹಿಂದೆ ಹಲವಾರು ಕಾರ್ಯಾಚರಣೆಗಳಿಂದ ತಪ್ಪಿಸಿಕೊಂಡಿದ್ದ.

ಜನವರಿ 18 ರಂದು ನಡೆದ ಎನ್‌ಕೌಂಟರ್‌ನಲ್ಲಿ ಪ್ಯಾರಾ ಕಮಾಂಡೋ ಸಾವನ್ನಪ್ಪಿ ಇತರರು ಗಾಯಗೊಂಡ ನಂತರ, ಭದ್ರತಾ ಪಡೆಗಳು ಚತ್ರೂ ಮತ್ತು ಕಿಶ್ತ್ವಾರ್‌ನ ಪಕ್ಕದ ಅರಣ್ಯ ಪ್ರದೇಶಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com