ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆಗೆ ಸ್ವಪಕ್ಷದಲ್ಲೇ ತೀವ್ರ ವಿರೋಧ: ಆದರೆ ದೇಶದ ಹಿತಕ್ಕಾಗಿ ಇದು ಒಳ್ಳೆಯದು ಎಂದ ಖರ್ಗೆ; Video

ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಭಾಂಗಣದೊಳಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದ ಯುವ ಕಾಂಗ್ರೆಸ್ ಕಾರ್ಯರ್ತರ ನಡೆಯನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.
Mallikarjun Kharge
ಮಲ್ಲಿಕಾರ್ಜುನ ಖರ್ಗೆ
Updated on

ಬೆಂಗಳೂರು: ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಭಾಂಗಣದೊಳಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದ ಯುವ ಕಾಂಗ್ರೆಸ್ ಕಾರ್ಯರ್ತರ ನಡೆಯನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.

ಇನ್ನು ಘಟನೆ ಸಂಬಂಧ​ ಕಾಂಗ್ರೆಸ್​ ಮುಖಂಡರನ್ನು ಬಂಧನಕ್ಕೀಡು ಮಾಡಿರುವುದನ್ನು ಖಂಡಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಸಹಜ. ದೇಶದ ಹಿತಕ್ಕಾಗಿ ಇಂತಹ ಪ್ರತಿಭಟನೆಗಳು ಆಗುತ್ತವೆ ಎಂದು ಹೇಳಿದ್ದಾರೆ. ಕಾಮನ್ ವೆಲ್ತ್ ಗೇಮ್​​ ವೇಳೆ ಬಿಜೆಪಿ ನಾಯಕರು ಪ್ರತಿಭಟನೆ ಮಾಡಿರಲಿಲ್ವ? ಯೂತ್​​ ಕಾಂಗ್ರೆಸ್​​ನವರು ಜನತೆಯ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರತಿಭಟನೆ ಮಾಡಿದ್ದಾರೆ ಎಂದು ಹೇಳಿದರು.

ಕಳೆದ ಶುಕ್ರವಾರ ಭಾರತ್ ಮಂಟಪಂನಲ್ಲಿ ನಡೆದ ಎಐ ಶೃಂಗಸಭೆಯ ಸಂದರ್ಭ ಯುವ ಕಾಂಗ್ರೆಸ್ಸಿನ ನಾಯಕರು ಏಕಾಏಕಿ ತಾವು ತೊಟ್ಟಿದ್ದ ಶರ್ಟನ್ನು ಕಳಚಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ನೇಪಾಳದ ಜೆನ್‌ ಝಿ ಪ್ರತಿಭಟನೆಯಿಂದ ಪ್ರೇರಿತರಾದ ಕಾಂಗ್ರೆಸ್ ಕಾರ್ಯಕರ್ತರು ಎಐ ಶೃಂಗಸಭೆಯಲ್ಲಿ ಗಲಭೆ ಸೃಷ್ಟಿಸಲು ಪಿತೂರಿ ನಡೆಸಿದ್ದರು ಎಂಬ ವಿಚಾರ ಪೊಲೀಸ್ ತನಿಖೆ ವೇಳೆ ಬಯಲಾಗಿದೆ.

Mallikarjun Kharge
'ಇಂಡಿಯಾ ಎಐ ಸಮ್ಮಿಟ್' ವೇಳೆ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ; Congress ನಾಯಕಿ ಮಾರ್ಗರೇಟ್ ಆಳ್ವಾ ಆಕ್ಷೇಪ; Video

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com