ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ-Video

ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ನಡೆಸುತ್ತಿದ್ದ ಬೀಚ್‌ಕ್ರಾಫ್ಟ್ ಸಿ90 ಏರ್ ಆಂಬುಲೆನ್ಸ್ ನಿನ್ನೆ ಸಂಜೆ ರಾಂಚಿಯಿಂದ ದೆಹಲಿಗೆ ತೆರಳುವ ಮಾರ್ಗದಲ್ಲಿ ಚಾತ್ರಾ ಜಿಲ್ಲೆಯಲ್ಲಿ ಪತನಗೊಂಡಿತ್ತು.
Air Ambulance crash in Jharkand
ಜಾರ್ಖಂಡ್ ನಲ್ಲಿ ಏರ್ ಆಂಬ್ಯುಲೆನ್ಸ್ ಅಪಘಾತ
Updated on

ಜಾರ್ಖಂಡ್‌ನ ಚಾತ್ರಾ ಜಿಲ್ಲೆಯಲ್ಲಿ ಏರ್ ಆಂಬುಲೆನ್ಸ್ ಪತನಗೊಂಡು ಮೃತಪಟ್ಟ ಎಲ್ಲಾ ಏಳು ಮಂದಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಧಿಕಾರಿಗಳು ಘಟನೆಯ ಕುರಿತು ಸವಿಸ್ತಾರ ತನಿಖೆ ಆರಂಭಿಸಿದ್ದಾರೆ.

ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ನಡೆಸುತ್ತಿದ್ದ ಬೀಚ್‌ಕ್ರಾಫ್ಟ್ ಸಿ90 ಏರ್ ಆಂಬುಲೆನ್ಸ್ ನಿನ್ನೆ ಸಂಜೆ ರಾಂಚಿಯಿಂದ ದೆಹಲಿಗೆ ತೆರಳುವ ಮಾರ್ಗದಲ್ಲಿ ಚಾತ್ರಾ ಜಿಲ್ಲೆಯಲ್ಲಿ ಪತನಗೊಂಡಿತ್ತು. ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳನ್ನು ಒಳಗೊಂಡಂತೆ ಎಲ್ಲಾ ಏಳು ಮಂದಿ ಮೃತಪಟ್ಟಿದ್ದಾರೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ವಿಮಾನವು ನಿನ್ನೆ ಸಂಜೆ 7.11ಕ್ಕೆ ರಾಂಚಿ ವಿಮಾನ ನಿಲ್ದಾಣದಿಂದ ಹೊರಟಿದ್ದು, ಸುಮಾರು 20 ನಿಮಿಷಗಳ ನಂತರ, ಸಂಜೆ 7.30ರ ವೇಳೆಗೆ ಏರ್ ಟ್ರಾಫಿಕ್ ಕಂಟ್ರೋಲ್‌ನ ಸಂಪರ್ಕ ಕಳೆದುಕೊಂಡು ನಾಪತ್ತೆಯಾಗಿತ್ತು.

Air Ambulance crash in Jharkand
ಜಾರ್ಖಂಡ್‌ ಸಮೀಪ ಚಾತ್ರಾದಲ್ಲಿ ಪತನಗೊಂಡ ರಾಂಚಿ–ದೆಹಲಿ ಏರ್ ಆಂಬ್ಯುಲೆನ್ಸ್: ಎಲ್ಲಾ 7 ಮಂದಿ ಸಾವು-Video

ರಾಂಚಿ ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಕುಮಾರ್, ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಅಪಘಾತಕ್ಕೆ ಕಾರಣವಾಗಿರಬಹುದು. ಆದರೆ ನಿಖರ ಕಾರಣವನ್ನು ಅಧಿಕೃತ ತನಿಖೆಯ ನಂತರವೇ ತಿಳಿದುಬರುವುದು ಎಂದು ತಿಳಿಸಿದ್ದಾರೆ.

ಮೃತರನ್ನು ಕ್ಯಾಪ್ಟನ್ ವಿವೇಕ್ ವಿಕಾಸ್ ಭಗತ್, ಕ್ಯಾಪ್ಟನ್ ಸವರಾಜ್‌ದೀಪ್ ಸಿಂಗ್, ಸಂಜಯ್ ಕುಮಾರ್, ಡಾ. ವಿಕಾಸ್ ಕುಮಾರ್ ಗುಪ್ತಾ, ಸಚಿನ್ ಕುಮಾರ್ ಮಿಶ್ರಾ, ಅರ್ಚನಾ ದೇವಿ ಮತ್ತು ಧುರು ಕುಮಾರ್ ಎಂದು ಗುರುತಿಸಲಾಗಿದೆ. ಚಾತ್ರಾ ಉಪ ಆಯುಕ್ತ ಕೀರ್ತಿಶ್ರೀ ಜಿ ಅವರ ಪ್ರಕಾರ, ರಕ್ಷಣಾ ತಂಡಗಳು ಅರಣ್ಯ ಪ್ರದೇಶದಲ್ಲಿದ್ದ ಅಪಘಾತ ಸ್ಥಳದಿಂದ ಎಲ್ಲಾ ಮೃತದೇಹಗಳನ್ನು ಪತ್ತೆಹಚ್ಚಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿವೆ.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ತನ್ನ ಪ್ರಕಟಣೆಯಲ್ಲಿ, ವಿಟಿ-ಎಜೆವಿ ನೋಂದಣಿಯ ವಿಮಾನವು ರಾಂಚಿ–ದೆಹಲಿ ಮಾರ್ಗದಲ್ಲಿ ವೈದ್ಯಕೀಯ ತುರ್ತು ಸ್ಥಳಾಂತರ ಸೇವೆ ನಡೆಸುತ್ತಿತ್ತು. ಸಂಜೆ 7.34ಕ್ಕೆ ಕೋಲ್ಕತ್ತಾ ಏರ್ ಟ್ರಾಫಿಕ್ ಕಂಟ್ರೋಲ್‌ನೊಂದಿಗೆ ಸಂಪರ್ಕ ಸಾಧಿಸಿದ ನಂತರ, ವಾರಾಣಸಿಯಿಂದ ದಕ್ಷಿಣ–ಪೂರ್ವಕ್ಕೆ ಸುಮಾರು 100 ನಾಟಿಕಲ್ ಮೈಲು ದೂರದಲ್ಲಿ ಸಂವಹನ ಮತ್ತು ರಾಡಾರ್ ಸಂಪರ್ಕ ಕಳೆದುಕೊಂಡಿತು.

ವಿಮಾನ ಅಪಘಾತದ ಕಾರಣವನ್ನು ಪತ್ತೆಹಚ್ಚಲು ಏರ್‌ಕ್ರಾಫ್ಟ್ ಅಪಘಾತ ತನಿಖಾ ಬ್ಯೂರೋ (AAIB) ತಂಡವನ್ನು ಅಪಘಾತ ಸ್ಥಳಕ್ಕೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com