ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: Instagramನಲ್ಲಿ 100 ಮಿ. ಫಾಲೋವರ್ಸ್ ದಾಟಿದ ಮೊದಲ ವಿಶ್ವ ನಾಯಕ

2014ರಲ್ಲಿ ಇನ್‌ಸ್ಟಾಗ್ರಾಂ ಖಾತೆ ಸೇರಿದ್ದ ಪ್ರಧಾನಿ ಮೋದಿ ಅವರಿಗೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಎರಡು ಪಟ್ಟು ಹೆಚ್ಚು ಅನುಯಾಯಿಗಳಿದ್ದಾರೆ.
PM Narendra Modi
ಪ್ರಧಾನ ಮಂತ್ರಿ ನರೇಂದ್ರ ಮೋದಿ
Updated on

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗುರುವಾರ ಐತಿಹಾಸಿಕ ಮೈಲುಗಲ್ಲು ಸಾಧಿಸಿದ್ದು, ಇನ್ಸ್ಟಾಗ್ರಾಂನಲ್ಲಿ 100 ಮಿಲಿಯನ್ ಅನುಯಾಯಿಗಳನ್ನು ಹೊಂದಿದ ವಿಶ್ವದ ಮೊದಲ ನಾಯಕ ಮತ್ತು ರಾಜಕಾರಣಿಯಾಗಿ ಹೊರಹೊಮ್ಮಿದ್ದಾರೆ. 2014ರಲ್ಲಿ ಇನ್‌ಸ್ಟಾಗ್ರಾಂ ಖಾತೆ ಸೇರಿದ್ದ ಪ್ರಧಾನಿ ಮೋದಿ ಅವರಿಗೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಎರಡು ಪಟ್ಟು ಹೆಚ್ಚು ಅನುಯಾಯಿಗಳಿದ್ದಾರೆ.

ಮುಂದಿನ ಐದು ಪ್ರಮುಖ ಜಾಗತಿಕ ನಾಯಕರ ಒಟ್ಟು ಅನುಯಾಯಿಗಳ ಸಂಖ್ಯೆಯೂ ಮೋದಿ ಅವರ ವೈಯಕ್ತಿಕ ಅನುಯಾಯಿಗಳಿಗಿಂತ ಕಡಿಮೆಯಾಗಿದೆ. ಡೊನಾಲ್ಡ್ ಟ್ರಂಪ್ ಅವರಿಗೆ 43.2 ಮಿಲಿಯನ್ ಅನುಯಾಯಿಗಳಿದ್ದು, ಇಂಡೋನೇಷ್ಯಾ ಅಧ್ಯಕ್ಷ ಪ್ರೊಬೊವೊ ಸುಬಿಯಂಟೊ ಅವರಿಗೆ 15 ಮಿಲಿಯನ್ ಅನುಯಾಯಿಗಳಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲುಲಾ ಅವರಿಗೆ 14.4 ಮಿಲಿಯನ್, ಟರ್ಕಿ ಅಧ್ಯಕ್ಷ  ರೆಸೆಪ್ ತಯ್ಯಿಪ್ ಎರ್ಡೋಗನ್ ಅವರಿಗೆ 11.6 ಮಿಲಿಯನ್ ಮತ್ತು ಅರ್ಜೆಂಟಿನಾ ಅಧ್ಯಕ್ಷ ಜೇವಿಯರ್ ಮಿಲೀ ಅವರಿಗೆ 6.4 ಮಿಲಿಯನ್ ಅನುಯಾಯಿಗಳಿದ್ದಾರೆ.

PM Narendra Modi
'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಭಾರತದಲ್ಲಿಯೂ ಇನ್‌ಸ್ಟಾಗ್ರಾಂನಲ್ಲಿ ಮೋದಿಯವರು ಇತರ ರಾಜಕೀಯ ನಾಯಕರಿಗಿಂತ ಬಹಳ ಮುಂದಿದ್ದಾರೆ. ಎರಡನೇ ಸ್ಥಾನದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿದ್ದು, ಅವರಿಗೆ ಸುಮಾರು 16.1 ಮಿಲಿಯನ್ ಅನುಯಾಯಿಗಳಿದ್ದಾರೆ. ನಂತರ ರಾಹುಲ್ ಗಾಂಧಿಯವರಿಗೆ ಸುಮಾರು 12.6 ಮಿಲಿಯನ್ ಅನುಯಾಯಿಗಳಿದ್ದಾರೆ.

ಪ್ರಸ್ತುತ ಪ್ರಧಾನಿ ಮೋದಿ ಇಸ್ರೇಲ್‌ಗೆ ಎರಡು ದಿನಗಳ ಅಧಿಕೃತ ಭೇಟಿಯಲ್ಲಿದ್ದಾರೆ. ನಿನ್ನೆ ಬುಧವಾರ ಇಸ್ರೇಲ್ ಸಂಸತ್ತಾದ ನೆಸ್ಸೆಟ್ ನಿಂದ ಅತ್ಯುನ್ನತ ಗೌರವವಾದ “ಸ್ಪೀಕರ್ ಆಫ್ ದ ಕ್ನೆಸೆಟ್ ಮೆಡಲ್” ಪ್ರಶಸ್ತಿಯನ್ನು ಅವರಿಗೆ ಪ್ರದಾನಿಸಲಾಯಿತು.

PM Narendra Modi
'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

ಭಾರತ–ಇಸ್ರೇಲ್ ತಂತ್ರಾತ್ಮಕ ಸಂಬಂಧಗಳನ್ನು ಬಲಪಡಿಸಲು ಮೋದಿ ಅವರು ತಮ್ಮ ವೈಯಕ್ತಿಕ ನಾಯಕತ್ವದ ಮೂಲಕ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಇಸ್ರೇಲ್ ಸಂಸತ್ತಿನಲ್ಲಿ ಮಾಡಿದ ಭಾಷಣದ ಬಳಿಕ ಈ ಪದಕವನ್ನು ಪ್ರದಾನಿಸಲಾಯಿತು. ಭಾಷಣದ ನಂತರ ಮೋದಿ ಅವರು ನೆಸ್ಸೆಟ್ ಸದಸ್ಯರೊಂದಿಗೆ ಸಂವಾದ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com